ದಾವಣಗೆರೆ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ.ಹೀಗಾಗಿ ಜಿಲ್ಲೆಯಲ್ಲಿ ಸಾಕಷ್ಟು ಅನಾಹುತಗಳಾಗಿವೆ.
ನಿರಂತರವಾಗಿ ಸುರಿದ ಮಳೆಯಿಂದಾಗಿ ಭದ್ರಾ ಕಾಲುವೆಗಳು ಸಂಪೂರ್ಣವಾಗಿ ಭರ್ತಿಯಾಗಿದೆ. ಇದರಿಂದಾಗಿ ಅಡಕೆ ತೋಟಗಳಿಗೆ ನೀರು ನುಗ್ಗಿದ್ದು, ಸಂಪೂರ್ಣ ಜಲಾವೃತಗೊಂಡಿದೆ.
ಅಡಕೆ ಕೊಯ್ಲಿಗೆ ಬಂದಿದ್ದರಿಂದ ರೈತನಿಗೆ ಆತಂಕ ಶುರುವಾಗಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದಲ್ಲಿ ಮಳೆಯಿಂದ ಅಡಕೆ ತೋಟ ಜಲಾವೃತವಾಗಿದ್ದು, ರೈತ ಕಣ್ಣೀರು ಸುರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ. ಚನ್ನಗಿರಿ ತಾಲೂಕಿನ ಮಲಹಾಳ್ ಸೇರಿದಂತೆ ಸುತ್ತಮುತ್ತಲಿನ ಹಲವಾರು ಗ್ರಾಮಗಳಲ್ಲಿ ಅಡಕೆ ತೋಟ ಜಲಾವೃತವಾಗಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಇದಲ್ಲದೇ ನೂರು ಎಕರೆ ಪ್ರದೇಶದ ಅಡಕೆ ತೋಟಕ್ಕೆ ನೀರು ನುಗ್ಗಿದ್ದರಿಂದ ಇಡೀ ಅಡಕೆ ತೋಟಗಳು ದ್ವೀಪದಂತಾಗಿದೆ.