ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ( Actor Puneeth Rajkumar ) ನಮ್ಮನ್ನು ಅಗಲಿ ಹಲವು ದಿನಗಳೇ ಕಳೆದಿದ್ದರೂ, ಅವರ ಸಾಮಾಜಿಕ ಸೇವೆ, ನಟಿಸಿದಂತ ಚಿತ್ರಗಳ ಮೂಲಕ ಎಲ್ಲರ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಇಂತಹ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಈ ಪ್ರಶಸ್ತಿಯನ್ನು ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಪ್ರದಾನ ಮಾಡಲಾಗುತ್ತಿದೆ.
ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ರಾಜ್ ಕುಟುಂಬದೊಂದಿಗೆ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ನಾನು ನಮ್ಮ ನೆಚ್ಚಿನ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ಸಭೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ( Karnataka Rathna Award ) ಕೊಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಮಾಡುವ ಬಗ್ಗೆಯೂ ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ನವೆಂಬರ್ 1ರಂದು ಸಂಜೆ 4 ಗಂಟೆಗೆ ವಿಧಾನಸಭೆಯ ಮೆಟ್ಟಿಲ ಮೇಲೆ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಪ್ರಶಸ್ತಿ ಅತ್ಯಮೂಲ್ಯವಾಗಿದ್ದಾಗಿದೆ. 2009ರಿಂದ ಯಾರಿಗೂ ಕೊಟ್ಟಿರಲಿಲ್ಲ. ಈಗಾಗಲೇ 8 ಜನರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಹೇಳಿದರು.
BREAKING: ಹಾಸನಾಂಭ ದೇವರ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಸಾವು
ತಮ್ಮ ಜೀವನದಲ್ಲಿ ನಿಜವಾದ ಸಾಧನೆ ಮಾಡಿರುವಂತ, ನಮ್ಮ ಮನಸ್ಸಿನಲ್ಲಿ ಸದಾ ಕಾಲ ಚಿರಸ್ಥಾಯಿಯಾಗಿರುವಂತ ಪುನೀತ್ ರಾಜ್ ಕುಮಾರ್ ಗೆ ನೀಡಲಾಗುತ್ತಿದೆ. ಹಲವಾರು ಜನ ಶ್ರೇಷ್ಠ ಸಾಹಿತಿಗಳು, ಚಲನಚಿತ್ರ ನಟರು ಸೇರಿದಂತೆ ವಿವಿಧ ಗಣ್ಯರು ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ರಾಜ್ಯ ‘ಆಗ್ನಿಶಾಮಕ ದಳ’ಕ್ಕೆ ಮತ್ತಷ್ಟು ಬಲ: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಸಿಎಂ ಲೋಕಾರ್ಪಣೆ