ಬೆಂಗಳೂರು : ಅಕ್ಟೋಬರ್ 30 ರ ಒಳಗಾಗಿ ಕರ್ನಾಟಕ ಸರಕಾರದ ( Karnataka Government ) ಮಹತ್ವಾಕಾಂಕ್ಷಿ “ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ್” ರೈಲಿನ ಸಿದ್ದತೆಗಳನ್ನು ಪೂರ್ಣಗೊಳಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಐಆರ್ಸಿಟಿಸಿ, ಕೆಎಸ್ಟಿಡಿಸಿ ಮತ್ತು ರೈಲ್ವೇ ಅಧಿಕಾರಿಗಳು ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿದ್ದತೆಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಭವ್ಯ ಕಾಶಿ – ದಿವ್ಯ ಕಾಶಿ ಯ ಭವ್ಯತೆಯನ್ನ ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೋಡಿ ಆನಂದಿಸಬೇಕು ಎನ್ನುವ ಉದ್ದೇಶದಿಂದ ಈ ಬಾರಿಯ ಬಜೆಟ್ ನಲ್ಲಿ ರಿಯಾಯಿತಿ ದರದ ಪ್ಯಾಕೇಜ್ ಪ್ರವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಮಾನ್ಯ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮುತುವರ್ಜಿಯಿಂದ ಭಾರತ್ ಗೌರವ್ ಯೋಜನೆಯ ಅಡಿಯಲ್ಲಿ ವಿಶೇಷ ರೈಲನ್ನ ಸಿದ್ದಗೊಳಿಸಲಾಗಿದೆ. ಈ ಸಿದ್ದತೆಗಳು ಅಂತಿಮ ಹಂತಕ್ಕೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ರೈಲು ಉದ್ಘಾಟನೆಗೆ ಸಿದ್ದವಾಗಲಿದೆ.
ರಾಜ್ಯ ‘ಆಗ್ನಿಶಾಮಕ ದಳ’ಕ್ಕೆ ಮತ್ತಷ್ಟು ಬಲ: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಸಿಎಂ ಲೋಕಾರ್ಪಣೆ
ಕೆಲವು ದಿನಗಳ ಹಿಂದೆ ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ ಈ ಮಹತ್ವಕಾಂಕ್ಷಿ ಯೋಜನೆ ಪ್ರಾರಂಭಕ್ಕೆ ಇದ್ದಂತಹ ಕೆಲವು ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರೈಲ್ವೇ ಇಲಾಖೆಯಿಂದ ಕೆಲಸಗಳಿಗೆ ಚುರುಕು ದೊರಕಿದೆ. ಇಂದು ಈ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಮುಖರೊಂದಿಗೆ ಸಭೆಯನ್ನು ನಡೆಸಿದ್ದೇನೆ. ಯೋಜನೆ ಸಿದ್ದಗೊಳಿಸುವ ನಿಟ್ಟಿನಲ್ಲಿ ಅಂತಿಮ ಸೂಚನೆಗಳನ್ನು ನೀಡಿದ್ದೇನೆ. ಅಲ್ಲದೇ, ಯೋಜನೆಗೆ “ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ” ಎಂದು ಹೆಸರನ್ನು ಅಂತಿಮಗೊಳಿಸಿದ್ದೇವೆ. ಅಕ್ಟೋಬರ್ 30 ರ ಒಳಗಾಗಿ ರೈಲು ಎಲ್ಲಾ ರೀತಿಯಲ್ಲೂ ಸಜ್ಜಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಪ್ರತಿ ದಿನ ಈ ಯೋಜನೆಯ ಪ್ರಗತಿಯ ಬಗ್ಗೆ ವರದಿಯನ್ನು ತೆಗೆದುಕೊಳ್ಳುವುದಾಗಿ ಸಚಿವರು ಹೇಳಿದರು.
BREAKING: ಹಾಸನಾಂಭ ದೇವರ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಸಾವು
ಕೆಎಸ್ಟಿಡಿಸಿ ಹಾಗೂ ಐಆರ್ಸಿಟಿಸಿ ಯಿಂದ ಶೀಘ್ರದಲ್ಲೇ ಬುಕ್ಕಿಂಗ್
“ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ” ರೈಲಿನಲ್ಲಿ ಯಾತ್ರೆಯನ್ನು ಕೈಗೊಳ್ಳಲು ಬುಕ್ಕಿಂಗ್ ನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಕೆಎಸ್ಟಿಡಿಸಿ ಹಾಗೂ ಐಆರ್ಸಿಟಿಸಿ ಸಂಸ್ಥೆಗಳು ಈ ಬಗ್ಗೆ ವೆಬ್ಸೈಟ್ ಹಾಗೂ ಇನ್ನಿತರೆ ಅಗತ್ಯ ವಿಷಯಗಳನ್ನು ಇನ್ನು ಕೆಲವೇ ದಿನಗಳಲ್ಲಿ ಪ್ರಕಟಿಸುವಂತೆ ಸಚಿವರು ಸೂಚನೆ ನೀಡಿದರು.
5 ಸಾವಿರ ರೂ ಸಹಾಯಧನ
ನವೆಂಬರ್ ಮೊದಲ ವಾರದಲ್ಲಿ ಈ ಯೋಜನೆಯ ಮೊದಲ ರೈಲನ್ನು ಪ್ರಾರಂಭಿಸಲು ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. “ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ” ಎಂಬ ಹೆಸರನ್ನು ಅಂತಿಮಗೊಳಿಸಿದ್ದು, ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೂ ಈ ವಿಷಯ ತಂದಿದ್ದೇನೆ. ಈ ಯೋಜನೆಯ ಅಡಿಯಲ್ಲಿ ಪ್ರವಾಸ ಕೈಗೊಳ್ಳುವ ಯಾತ್ರಾರ್ಥಿಗಳಿಗೆ 5 ಸಾವಿರ ರೂಪಾಯಿಗಳ ಸಹಾಯಧನವನ್ನೂ ನೀಡಲಾಗುವುದು ಎಂದು ತಿಳಿಸಿದರು.