ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ( Backward Classes Welfare Department ) 2022-23ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ( Online Application ) ಆಹ್ವಾನಿಸಿದೆ.
ಆಸಕ್ತರು ಇಲಾಖಾ ವೆಬ್ಸೈಟ್ www.bcwd.karnataka.gov.in ರಲ್ಲಿ ದಿ: 10/11/2022 ರೊಳಗಾಗಿ ಸಲ್ಲಿಸುವುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಬೇಕಾದ ಅರ್ಹತೆ, ದಾಖಲೆಗಳ ವಿವರಗಳನ್ನು ವೆಬ್ಸೈಟ್ ಮೂಲಕ ಪಡೆದುಕೊಳ್ಳುವುದು. ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov. ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-65970006/ 08182-222129 ಗಳನ್ನು ಸಂಪರ್ಕಿಸುವುದು.
ರಾಜ್ಯ ‘ಆಗ್ನಿಶಾಮಕ ದಳ’ಕ್ಕೆ ಮತ್ತಷ್ಟು ಬಲ: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಸಿಎಂ ಲೋಕಾರ್ಪಣೆ