ನವದೆಹಲಿ : ದೆಹಲಿ ವಾಯು ಮಾಲಿಇನ್ಯ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಪಟಾಕಿಯನ್ನು ನಿಷೇಧಿಸಿದೆ. ಆದರೂ ಪಟಾಕಿ ತಯಾರಿಕೆ ಮಾತ್ರ ಭರದಿಂದ ಸಾಗಿದೆ. ಇದೇ ವೇಳೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಅಕ್ಟೋಬರ್ ತಿಂಗಳಲ್ಲಿ ಪೊಲೀಸರು 13,700 ಕೆಜಿ ಪಟಾಕಿಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ 75 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಅಕ್ಟೋಬರ್ 1 ರಿಂದ 19 ರವರೆಗೆ ಪೊಲೀಸರು ಶೇಖರಣೆ ಮಾಡಿದ್ದ ಅಥವಾ ಮಾರಾಟಕ್ಕಾಗಿ ಇಟ್ಟಿದ್ದ 13,767.719 ಕೆಜಿ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 75 ಪ್ರಕರಣಗಳನ್ನು ದಾಖಲಿಸಿದ್ದಾರೆ. ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಆರು ಪ್ರಕರಣಗಳನ್ನು ದಾಖಲಿಸಿ 3.608 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಅಕ್ರಮ ಪಟಾಕಿಗಳ ಮಾರಾಟ, ಸಂಗ್ರಹಣೆ ಮತ್ತು ಪೂರೈಕೆಯ ವಿರುದ್ಧ ನಗರ ಪೊಲೀಸರ ವಿವಿಧ ಘಟಕಗಳು ರಾಷ್ಟ್ರ ರಾಜಧಾನಿಯ ಹಲವು ಭಾಗಗಳಲ್ಲಿ ದಾಳಿ ನಡೆಸಿವೆ.
ನಾವು ಪಟಾಕಿ ಎಷ್ಟು ಹಾನಿಕಾರಕ ಎಂಬುದರ ಕುರಿತು ಜಾಗೃತಿ ಮೂಡಿಸುತ್ತಿದ್ದೇವೆ, ಜನರಿಗೆ ತಿಳುವಳಿಕೆ ನೀಡುತ್ತಿದ್ದೇವೆ. ಹೊಗೆಯಿಂದ ಪರಿಸರಕ್ಕೆ, ಮನುಷ್ಯರಿಗೆ ಮತ್ತು ಇತರರಿಗೆ ಅಪಾಯಕಾರಿ ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ,
ನಿಷೇಧಿತ ಪಟಾಕಿಗಳನ್ನು ಅಕ್ರಮವಾಗಿ ಮಾರಾಟ ಮಾಡುವುದು, ಸಂಗ್ರಹಿಸುವುದು ಮತ್ತು ಸರಬರಾಜು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದರು.
ಗುರುವಾರ ಶಾಲೆಯೊಂದರ ವಿದ್ಯಾರ್ಥಿಗಳು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಚಾಂದನಿ ಚೌಕ್ನಲ್ಲಿ ಪಟಾಕಿ ವಿರೋಧಿ ರ್ಯಾಲಿ ನಡೆಸಿದರು.
ಮತ್ತು ಪೊಲೀಸ್ ಠಾಣೆ ಮಟ್ಟದಲ್ಲಿ ವಿಶೇಷ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳು ನಿರಂತರವಾಗಿ ಪಟಾಕಿ ಮಾರಾಟಕ್ಕೆ ಕಡಿವಾಣ ಹಾಕುತ್ತಿವೆ. ಜಿಲ್ಲೆಗಳಲ್ಲಿಯೂ ದಿಢೀರ್ ತಪಾಸಣೆ ನಡೆಸುತ್ತಿದ್ದೇವೆ. ಎರಡರಲ್ಲಿಯೂ ಕೆಲಸ ಮಾಡುತ್ತಿದ್ದೇವೆ ಎಂದೇಳಿದ್ದಾರೆ.
ಬುಧವಾರ, ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ದೀಪಾವಳಿಯಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಹೇಳಿದರು.
ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಸೆಪ್ಟೆಂಬರ್ನಲ್ಲಿ, ನಗರಾಡಳಿತವು ಜನವರಿ 1 ರವರೆಗೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ವಿಧಿಸಿತ್ತು. ಇದು ಕಳೆದೆರಡು ವರ್ಷಗಳಿಂದ ಅನುಸರಿಸಲಾಗುತ್ತಿದೆ.
ಪ್ರಮುಖ ಕಾರ್ಯಾಚರಣೆಯಲ್ಲಿ, ದೆಹಲಿ ಪೊಲೀಸರ ಅಪರಾಧ ವಿಭಾಗವು ಮಂಡೋಲಿ ಕೈಗಾರಿಕಾ ಪ್ರದೇಶದಿಂದ ಇಬ್ಬರನ್ನು ಬಂಧಿಸಿದೆ ಮತ್ತು 2,625 ಕೆಜಿ ಅಕ್ರಮ ಪಟಾಕಿಗಳನ್ನು ವಶಪಡಿಸಿಕೊಂಡಿದೆ. ಕರ್ನಾಲ್ (ಹರಿಯಾಣ) ಮತ್ತು ಸಂಗ್ರೂರ್ (ಪಂಜಾಬ್) ವಿತರಕರಿಂದ ಪಟಾಕಿಗಳನ್ನು ಖರೀದಿಸಿದ್ದೇವೆ ಎಂದು ಇಬ್ಬರು ಬಹಿರಂಗಪಡಿಸಿದ್ದಾರೆ.
ಮತ್ತೊಂದು ಕಾರ್ಯಾಚರಣೆಯಲ್ಲಿ, ಪೊಲೀಸರು ಸೋಮವಾರ ಮದಂಗಿರ್ನ ಸೆಂಟ್ರಲ್ ಮಾರ್ಕೆಟ್ ಪ್ರದೇಶದ 53 ವರ್ಷದ ವ್ಯಕ್ತಿಯನ್ನು ಬಂಧಿಸಿ ಅವರ ಅಂಗಡಿಯಿಂದ 1,193 ಕೆಜಿ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
BIGG NEWS ; ಬ್ರಿಟನ್ ಪ್ರಧಾನಿಯಾಗ್ತಾರಾ? ‘ರಿಷಿ ಸುನಕ್’.. “ಹೌದು” ಎನ್ನುತ್ತಿವೆ ಸಮೀಕ್ಷೆಗಳು.!