ಬೆಂಗಳೂರು : ರಾಜ್ಯದ ಮದರಸಾಗಳಲ್ಲಿ ಮಕ್ಕಳಿಗೆ ಹೊಸ ಶಿಕ್ಷಣ ಪದ್ಧತಿಯಂತೆ ಬೋಧಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಶೀಘ್ರವೇ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿಯಾಗುವ ಸಾಧ್ಯತೆ ಇದೆ.
ಮದರಸಾಗಳಲ್ಲಿ ರಾಜ್ಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ತರಲು ಚಿಂತನೆ ನಡೆದಿದ್ದು, ಮದರಸಾಗಳಲ್ಲಿ ಮಕ್ಕಳಿಗೆ ಇತಿಹಾಸ, ಗಣಿತ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಶೀಘ್ರವೇ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಈ ಹಿನ್ನೆಲೆಯಲ್ಲಿ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ದಿನಗಳಲ್ಲಿ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲು ಈಗಾಗಲೇ ಸಿದ್ಧತೆ ನಡೆದಿದೆ ಎನ್ನಲಾಗಿದೆ.