ಹಾಸನ : ನಿನ್ನೆ ತಡ ರಾತ್ರಿ ಸುರಿದ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಭಾರೀ ಮಳೆಗೆ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ.
ಹಾಸನದ ಹರ್ಷಮಹಲ್ ಬಳಿ ಕಾಂಪೌಂಡ್ ಪಕ್ಕದಲ್ಲಿ ನಿದ್ರೆ ಮಾಡುತ್ತಿದ್ದಾಗ ಬೀದಿಬದಿ ವ್ಯಾಪಾರಿ ವೆಂಕಟೇಶ್ ಸಾವನ್ನಪ್ಪಿದ್ದಾನೆ. ಈ ಘಟನೆಯ ಬಗ್ಗೆ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಳೆಯ ಆರ್ಭಟವೂ ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ (Yellow Alert) ನೀಡಲಾಗಿದೆ.
ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು (ಗುರುವಾರ) ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ.