ಮಂಗಳೂರು ಸುರತ್ಕಲ್ ಟೋಲ್ಗೇಟ್ ಕಿತ್ತೆಸೆಯಲು ಯತ್ನಿಸಿದ ಹಿನ್ನೆಲೆಯಲ್ಲಿ ಟೋಲ್ಗೇಟ್ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ದೂರು ನೀಡಿದ್ದು, ಹೋರಾಟಗಾರರ ಮೇಲೆ ಎಫ್ ಐ ಆರ್ ದಾಖಲಾಗಿದೆ.
ಅ.18 ರಂದು ಮಂಗಳೂರಿನ ಸುರತ್ಕಲ್ ಟೋಲ್ಗೇಟ್ ಬಳಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸುರತ್ಕಲ್ ಟೋಲ್ಗೇಟ್ ಅಕ್ರಮ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಹಾಕಿದ್ದ ತಡೆಬೇಲಿ ಮುರಿದು ಟೋಲ್ಗೇಟ್ನತ್ತ ಹೋರಾಟಗಾರರು ನುಗ್ಗಿದ್ದರು.
ಈ ವೇಳೆ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ರು. ಆದರೆ ಇದೀಗ ಟೋಲ್ಗೇಟ್ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನೀಡಿದ ದೂರಿನಂತೆ ಹೋರಾಟಗಾರರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.