ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಕ್ಟೋಬರ್-2022ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಅ-27 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಹಾಗೂ ಮ. 03-00 ರಿಂದ ಸಂ. 5.00ರವರೆಗೆ ತೀರ್ಥಹಳ್ಳಿ ತಾಲೂಕು ಪಂಚಾಯತ್ ಸಭಾಂಗಣ.
ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಪ್ರಕರಣ : ಶ್ರೀಮಂತರ ಮನೆಗೆ ಕನ್ನ ಹಾಕಿ ದಾನ ದರ್ಮ ಮಾಡ್ತಿದ್ದ ‘ಕಳ್ಳ’ ಅರೆಸ್ಟ್
ಅ-28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹೊಸನಗರ ತಾಲೂಕು ಪಂಚಾಯತ್ ಸಭಾಂಗಣ ಮತ್ತು ಮ.3.00 ರಿಂದ ಸಂ. 5.00ರವರೆಗೆ ಸಾಗರ ತಾಲೂಕು ಪಂಚಾಯತ್ ಸಭಾಂಗಣ.
ಅ-29 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸೊರಬ ತಾಲೂಕು ಪಂಚಾಯತ್ ಸಭಾಂಗಣ ಹಾಗೂ ಮ. 03-00 ರಿಂದ ಸಂ. 5.00ರವರೆಗೆ ಶಿಕಾರಿಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.