ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಆಕ್ಟೋಬರ್ 25ರ ಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿರುವ ಹಿನ್ನೆಲೆ ದೇವಸ್ಥಾನಗಳಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದ್ದು, ಭಕ್ತರು ಸಹಕರಿಸಬೇಕಾಗಿದೆ.
* ಶ್ರೀ ಕ್ಷೇತ್ರ ಧರ್ಮಸ್ಥಳ
ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರದಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿದ್ದು, ನಂತರ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 2:30ರವರೆಗೆ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
* ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ. ಅಕ್ಟೋಬರ್ 25ರಂದು ದೇವಸ್ಥಾನ ಇಡೀ ದಿನ ಬಾಗಿಲು ಮುಚ್ಚಲಿದೆ. ಆ ದಿನ ಯಾವುದೇ ಸೇವೆಗಳು, ಭೋಜನ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರ ಬೆಳಗ್ಗೆ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪೂಜಾ ಸೇವೆಗಳು, ದೇವರ ದರ್ಶನ ಆರಂಭಗೊಳ್ಳಲಿದೆ.
* ಕಟೀಲು ಶ್ರೀದುರ್ಗಾಪರಮೇಶ್ವರಿ
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಸೂರ್ಯ ಗ್ರಹಣ ನಿಮಿತ್ತ ದೇವರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರ ಮಧ್ಯಾಹ್ನ ಎಂದಿನಂತೆ ದೇವಸ್ಥಾನದಲ್ಲಿ ಅನ್ನ ಪ್ರಸಾದವಿರುತ್ತದೆ. ಗ್ರಹಣ ಆರಂಭಗೊಳ್ಳುವ ಅವಧಿಯಿಂದ ಬಿಡುವವರೆಗೆ ಭಕ್ತರಿಗೆ ದೇವಸ್ಥಾನಕ್ಕೆ ಪ್ರವೇಶವಿದ್ದು, ದೇವಸ್ಥಾನದಲ್ಲಿ ಜಪಮಾಡಬಹುದು. ಆದರೆ ಈ ಅವಧಿಯಲ್ಲಿ ಯಾವುದೇ ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ.
ಬೆಂಗಳೂರಿನಲ್ಲಿ ‘ಹಾಫ್ ಹೆಲ್ಮೆಟ್’ ಧರಿಸಿ ‘ರೂಲ್ಸ್ ಬ್ರೇಕ್’ ಮಾಡಿದ ಪೊಲೀಸ್ ಗೆ ಬಿತ್ತು ದಂಡ
BREAKING NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ : ಬೆಂಕಿ ಹಚ್ಚಿಕೊಂಡು ದಂಪತಿ & ಮಗಳು ಸಾವು