ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ. ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮಕ್ಕಾಗಿ ಎಲ್ಲ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಸೇರಿದ್ದಾರೆ.
ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್ ((Gandhada Gudi pre-release event ನಡೆಯುತ್ತಿದೆ. ಪುನೀತ್ ರಾಜ್ಕುಮಾರ್ ಅವರಿಗೆ ಎಲ್ಲರೂ ಸೇರಿ ವಿಶೇಷ ರೀತಿಯಲ್ಲಿ ನಮನ ಸಲ್ಲಿಸುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ ((Ashwini Puneeth Rajkumar), ಶಿವರಾಜ್ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಇಡೀ ಭಾರತ ಚಿತ್ರರಂಗದ ದಿಗ್ಗಜ ಗಣ್ಯರು ಭಾಗಿಯಾಗಿದ್ದಾರೆ.
.ನಗರದ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಾರತ ಚಿತ್ರರಂಗದ ಖ್ಯಾ ತ ಗಣ್ಯರು ಕಾರ್ಯಕ್ರಮಕ್ಕೆ ಧಾವಿಸಿದ್ದು ಅರ್ಮಾನ್ ಮಲ್ಲಿಕ್, ಗುರುಕಿರಣ್, ಕುನಾಲ್ ಗಾಂಜಾವಾಲಾ ರವರಿಂದ ಗಾಯನ ಕಾರ್ಯಕ್ರಮ ನಡೆಯಲಿದ್ದು, ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಹಲವು ಸ್ಯಾಂಡಲ್ ವುಡ್ ನಟ ನಟಿಯರು ಹೆಜ್ಜೆ ಹಾಕಲಿದ್ದಾರೆ.
ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.1400 ಪೊಲೀಸರ್, 180 ಪಿಎಸ್.ಐ, 60 ಇನ್ಸೆಪೆಕ್ಟರ್, 14 ಎಸಿಪಿ ಹಾಗೂ 3 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ, 20 ಕೆ.ಎಸ್.ಆರ್ಪಿ ತುಕಡಿ ಕೂಡ ಆ ಸ್ಥಳದಲ್ಲಿ ಇರಲಿದೆ. ಕಾರ್ಯಕ್ರಮವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಪಾಸ್ ಇದ್ದವರಿಗೆ ಪ್ರವೇಶವನ್ನು ಕಲ್ಪಿಸಲಾಗಿದೆ.
ಹಬ್ಬ..ಎಂದು ಮೈ ಮರೆಯದಿರಿ ಜೋಕೆ..! : ‘ಹಸಿರು ಪಟಾಕಿಗಳು’ ಸುರಕ್ಷಿತವಲ್ಲ |Green Crackers