ಬೆಂಗಳೂರು : ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಅವಘಡಗಳಿಗೆ ಮೂವರು ಬಲಿಯಾಗಿದ್ದಾರೆ.
BIGG NEWS : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ : ಇಂದಿನಿಂದ ವಿಶೇಷ ರೈಲು ಸಂಚಾರ
ಔರಾದ್ ನ ಚಿಮೆಗಾಂವ ಗ್ರಾಮದಲ್ಲಿ ಸಿಡಿಲು ಬಡಿದು ಚರಬಾಯಿ ಕೆರಬಾ ಮತ್ತು ಕಿಶನ್ ಕುಂಬಾರ ಎಂಬುವರು ಮೃತಪಟ್ಟಿದ್ದಾರೆ. ಅರ್ಚನಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನದ ಹರ್ಷಮಹಲ್ ರಸ್ತೆ ಬಿಜಿಎಸ್ ಚಿತ್ರಮಂದಿರದ ಎದುರು ಶಿಥಿಲಗೊಂಡಿದ್ದ ಕಾಂಪೌಂಡ್ ಕುಸಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
BIGG NEWS : ಬೆಳಗಾವಿಯಲ್ಲಿ ಘೋರ ದುರಂತ : ಪತಿ ಸಾವಿನಿಂದ ನೊಂದು ಮಗಳನ್ನು ಹತ್ಯೆಗೈದು ಪತ್ನಿ ಆತ್ಮಹತ್ಯೆ
ಇನ್ನು ರಾಜ್ಯದಲ್ಲಿ ಇಂದೂ ಮಳೆಯ ಅಬ್ಬರ ಮುಂದುವರೆಯಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು,ಮಂಡ್ಯ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.