ಚಿತ್ರದುರ್ಗ: ಫೋಕ್ಸೋ ಪ್ರಕರಣದಲ್ಲಿ ಜೈಲು ಪಲಾಗಿರುವ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.
ಇತ್ತ, ಚಿತ್ರದುರ್ಗ ಮುರುಘಾಮಠದ ಆವರಣದಲ್ಲಿನ ಮಡಿಲು ದತ್ತು ಕೇಂದ್ರದ ಮಕ್ಕಳನ್ನು ಸ್ಥಳಾಂತರಿಸುವುದಕ್ಕೆ ಸಿದ್ಧತೆ ನಡೆದಿದೆ.ಚಿತ್ರದುರ್ಗ ಮುರುಘಾಮಠದ ದತ್ತು ಕೇಂದ್ರದಲ್ಲಿರುವ ನಾಲ್ವರು ಬಾಲಕಿಯರು, ಐವರು ಬಾಲಕರು ಸೇರಿ 9ಜನ ಮಕ್ಕಳನ್ನು ಬೆಂಗಳೂರಿನ ಸರ್ಕಾರಿ ದತ್ತು ಕೇಂದ್ರಕ್ಕೆ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ 9 ಮಕ್ಕಳು ಆರು ವರ್ಷದೊಳಗಿರುವವರಾಗಿದ್ದಾರೆ. ಮಡಿಲು ದತ್ತು ಕೇಂದ್ರದಲ್ಲಿ ಇಬ್ಬರು ಬಾಲಕಿಯರ ಮಾಹಿತಿ ದಾಖಲಿಸದ ಹಿನ್ನೆಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಲ್ಕೂವರೆ ವರ್ಷದ ಬಾಲಕಿ ಮತ್ತು 17ವರ್ಷದ ಬಾಲಕಿ ಮಾಹಿತಿಯನ್ನು ದಾಖಲಿಸಿರಲಿಲ್ಲ. ಪೊಲೀಸರ ತನಿಖೆ ವೇಳೆ ಬಾಲಕಿಯರು ಪತ್ತೆಯಾಗಿದ್ದರು.