ನವದೆಹಲಿ: ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) 2 ಲಕ್ಷ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದ್ ಕುಟುಂಬಳಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಗಳನ್ನು ಪರಧಾನಿ ಮೋಧಿ ನಿಧಿಯಿಂದ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲದೆ ಎಂದು ಪ್ರಧಾನಿ ಹೇಳಿದರು.
The Prime Minister has announced an ex-gratia of Rs. 2 lakh from PMNRF for the next of kin of each deceased in the tragic bus accident in Madhya Pradesh. The injured would be given Rs. 50,000. https://t.co/24QEOITaL1
— PMO India (@PMOIndia) October 22, 2022
ಶುಕ್ರವಾರ ರಾತ್ರಿ ಮಧ್ಯಪ್ರದೇಶದ ರೇವಾದ ಸೊಹಗಿ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿ 30 ರಲ್ಲಿ ಹೈದರಾಬಾದ್ನಿಂದ ಗೋರಖ್ಪುರಕ್ಕೆ ತೆರಳುತ್ತಿದ್ದ ಬಸ್ ಟ್ರಾಲಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 15 ಜನರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಉತ್ತರ ಪ್ರದೇಶದ ನಿವಾಸಿಗಳು ಎಂದು ವರದಿಯಾಗಿದೆ.
ಗಾಯಗೊಂಡ 40 ಮಂದಿಯಲ್ಲಿ 20 ಮಂದಿಯನ್ನು ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರಾಣಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ಮತ್ತು ತೀವ್ರವಾಗಿ ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್ , ಮಧ್ಯಪ್ರದೇಶದ ರೇವಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ತುಂಬಾ ದುಃಖಕರವಾಗಿದೆ. ಅಗಲಿದ ಆತ್ಮಗಳಿಗೆ ಅವರ ಪಾದದಲ್ಲಿ ಸ್ಥಾನ ನೀಡಲಿ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.