ಚಿತ್ರದುರ್ಗ : ಜಿಲ್ಲೆಯ ಬಹು ನಿರೀಕ್ಷಿತ ಯೋಜನೆಯಾಗಿರುಲ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತಗತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸದುರ್ಗ ಪಟ್ಟಣದ ನ್ಯಾಯಾಲಯ ಉದ್ಘಾಟನೆ ಹಾಗೂ ಇನ್ನಿತರ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದು ಹೇಳಿದರು.
ಅಪ್ಪರ್ ಭದ್ರಾ ಮೇಲ್ದಂಡೆ ಯೋಜನೆ ಸಾರ್ವಜನಿಕ ಬಂಡವಾಳ ಹೂಡಿಕೆ ಸಮಿತಿ (PIB) ಅನುಮೋದನೆ ಆಗಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಆಗಬೇಕಿದೆ. ಈಗಾಗಲೇ ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆ ಮಾತನಾಡಿದ್ದೇನೆ. ರಾಜ್ಯದಲ್ಲಿಯೇ ಮೊದಲ ರಾಷ್ಟ್ರೀಯ ನೀರಾವರಿ ಯೋಜನೆ ಆಗಲಿದೆ ಎಂದು ಬೊಮ್ಮಾಯಿ ಹೇಳಿದರು.
BREAKING NEWS : ಕಾರವಾರ ನಗರದ ಜನರಲ್ಲಿ ಆತಂಕ ಮೂಡಿಸಿದ ಹೆಲಿಕಾಪ್ಟರ್ ಹಾರಾಟ!
ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ಬಾಕಿಯಿದ್ದು, ಶೀಘ್ರ ಪೂರ್ಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಕೆಲವು ರೈತರ ಸಮಸ್ಯೆಯಿದೆ, ಬಗೆಹರಿಸುತ್ತೇವೆ ಎಂದು ತಿಳಿಸಿದರು.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಶೀಘ್ರದಲ್ಲೇ ದೆಹಲಿಗೆ ತೆರಳುತ್ತೇನೆ, ಹೈಕಮಾಂಡ್ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಇನ್ನು ಚಿತ್ರದುರ್ಗ ಜಿಲ್ಲೆಗೆ ಮಂತ್ರಿಗಿರಿ ನೀಡದೆ ಮಲತಾಯಿ ಧೋರಣೆ ವಿಚಾರದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ “ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ಕೊಡಲು ಪ್ರಯತ್ನಿಸುತ್ತೇವೆ” ಎಂದು ಭರವಸೆ ನೀಡಿದರು.
BIGG NEWS : ರಾಜ್ಯಾದ್ಯಂತ 10,889 ಮಸೀದಿಗಳಿಗೆ ಆಜಾನ್ ಬಳಸಲು ಅನುಮತಿ ನೀಡಿದ ಸರ್ಕಾರ
ರಾಜಕೀಯ ಸನ್ನಿವೇಶದಿಂದ ಅವಕಾಶ ಸಿಕ್ಕಿಲ್ಲ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮತ್ತೆ ಮಂತ್ರಿಗಿರಿ ವಿಚಾರ ಹೈಕಮಾಂಡ್ ಈ ಬಗ್ಗೆ ತೀರ್ಮಾನಿಸಲಿದೆ ಎಂದರು.
ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ವಿಚಾರ ಪತ್ರಕರ್ತರ ಪ್ರಶ್ನೆಗೆ ನಿಮ್ಮನ್ನು ಕೇಳಿ ಮಾಡುತ್ತೇವೆಂದು ಹಾಸ್ಯ ಚಟಾಕಿಯನ್ನು ಸಿಎಂ ಹಾರಿಸಿದರು.