ಮಂಡ್ಯ: ಜಿಲ್ಲೆಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದೆ. ಅಂಗಡಿಯನ್ನು ಶುಚಿಗೊಳಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಛಾಯಾಗ್ರಾಹಕರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ.
BIGG NEWS : ರಾಜ್ಯಾದ್ಯಂತ 10,889 ಮಸೀದಿಗಳಿಗೆ ಆಜಾನ್ ಬಳಸಲು ಅನುಮತಿ ನೀಡಿದ ಸರ್ಕಾರ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಇಂದು ಘೋರ ದುರಂತವೇ ನಡೆದಿದೆ. ಬೆಸಗರಹಳ್ಳಿಯಲ್ಲಿ ವಿದ್ಯುತ್ ಪ್ರವಹಿಸಿ ಮಧುಸೂದನ್, ವಿವೇಕ್ ಎನ್ನುವಂತ ಇಬ್ಬರು ಛಾಯಾಗ್ರಾಹಕರು ಸಾವನ್ನಪ್ಪಿದ್ದಾರೆ.
ಅಂದಹಾಗೇ ಮೃತ ಮಧುಸೂದನ್ ಮತ್ತು ವಿವೇಕ್ ತಮ್ಮ ಅಂಗಡಿಯನ್ನು ದೀಪಾವಳಿ ಹಬ್ಬಕ್ಕೆ ಪೂಜೆ ಮಾಡೋ ಸಲುವಾಗಿ ಶುಚಿಗೊಳಿಸೋ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳ ರಕ್ತ ಹೀರುವ ದರಿದ್ರ ಬಿಜೆಪಿ ಸರ್ಕಾರ – ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಿಡಿ
ಇಬ್ಬರು ವಿದ್ಯುತ್ ಪ್ರವಹಿಸಿ ಸಾವನ್ನಪ್ಪೋದಕ್ಕೆ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ, ಈ ಬಗ್ಗೆ ಸಂಬಂಧ ಪಟ್ಟಂತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಸಗರಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
BREAKING NEWS : ಕಾರವಾರ ನಗರದ ಜನರಲ್ಲಿ ಆತಂಕ ಮೂಡಿಸಿದ ಹೆಲಿಕಾಪ್ಟರ್ ಹಾರಾಟ!