ದಾವಣಗೆರೆ : ರಾಜ್ಯ ಕುರುಬ ಸಂಘದ ನಿರ್ದೇಶಕರಾಗಿದ್ದ ಪಿ.ರಾಜಕುಮಾರ(63) ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಿ. ರಾಜಕುಮಾರ ಅವರಿಗೆ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ನಗರದ ಜೆಎಚ್ ಪಟೇಲ್ ಬಡಾವಣೆಯ ಅವರ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸ್ವಗ್ರಾಮ ದ್ವಾರನಕುಂಟೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಪಿ. ರಾಜಕುಮಾರ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನ ಆಗಲಿದ್ದಾರೆ.