ಗಾಜಿಯಾಬಾದ್(ಉತ್ತರ ಪ್ರದೇಶ): ಸಾಮೂಹಿಕ ಅತ್ಯಾಚಾರದ ಕಥೆಯನ್ನು ರೂಪಿಸಿದ್ದ ಆರೋಪದ ಮೇಲೆ ಗಾಜಿಯಾಬಾದ್ ಮಹಿಳೆಯನ್ನು ಬಂಧಿಸಲಾಗಿದೆ.
ಘಾಜಿಯಾಬಾದ್ನಲ್ಲಿ ಐವರು ಪುರುಷರು ಸಾಮೂಹಿಕ ಅತ್ಯಾಚಾರ ಮತ್ತು ಕ್ರೂರವಾಗಿ ವರ್ತಿಸಿದ್ದಾರೆ ಎಂಬ ದೆಹಲಿ ಮಹಿಳೆಯ ಹೇಳಿಕೆಯನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಪಿತೂರಿ ರೂಪಿಸಲಾಗಿತ್ತು ಎಂದು ತನಿಖೆ ವೇಳೆ ತಿಳಿದುಬಂದಿದ್ದು, ಮಹಿಳೆ ಸೇರಿ ಆಕೆಯ ಮೂವರು ಸಹಚರರಾದ ಆಜಾದ್, ಅಫ್ಜಲ್ ಮತ್ತು ಗೌರವ್ ಅವರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಮೀರತ್ನ ಇನ್ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್, ʻಅತ್ಯಾಚಾರ ಪ್ರಕರನಕ್ಕೆ ಸಂಬಂಧಿಸಿದಂತೆ ನಮಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ. ಹಾಗಾಗಿ ಸಾಕ್ಷ್ಯ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.
ಎರಡು ದಿನಗಳ ಕಾಲ ಐವರು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಕಬ್ಬಿಣದ ರಾಡ್ನಿಂದ ಕ್ರೂರವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಆದ್ರೆ, ಇದು ಸುಳ್ಳು ಮಾಹಿತಿಯಾಗಿದೆ. ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BIG NEWS: ಬೀದಿ ನಾಯಿಗಳಿಗೆ ನೀವು ಆಹಾರ ನೀಡಲು ಬಯಸಿದ್ರೆ, ಅವುಗಳನ್ನು ದತ್ತು ತೆಗೆದುಕೊಳ್ಳಿ: ಬಾಂಬೆ ಹೈಕೋರ್ಟ್
BIGG NEWS: ಆನಂದ ಮಾಮನಿ ರಾಜಕೀಯ ಕ್ಷೇತ್ರದಲ್ಲಿ ನಡೆದು ಬಂದ ಹಾದಿ ಹೇಗಿತ್ತು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ