ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೀಘ್ರವೇ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
BIG NEWS: ಇಂದು ʻಅಯೋಧ್ಯೆ ದೀಪೋತ್ಸವʼದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ | Ayodhya Deepotsav 2022
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಬಳಿಕ ರಾಜ್ಯ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಗಳಿವೆ. ಈ ಸಂಬಂಧ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ. ಅನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಶೀಘ್ರವೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆಗೆ ಚರ್ಚಿಸುತ್ತೇನೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮತ್ತೆ ಮಂತ್ರಿಗಿರಿ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIGG NEWS: ಗದಗನಲ್ಲಿ ಏಕಾಏಕಿ ಕುಸಿದ ಭೂಮಿ, ಅಲ್ಲಿಂದಲೇ ಉಕ್ಕಿ ಹರಿದಿದೆ ನೀರು; ನೋಡಲು ಮುಗಿಬಿದ್ದ ಜನರು