ಛತ್ತೀಸ್ಗಢ: ಛತ್ತೀಸ್ಗಢದ ಆರೋಗ್ಯ ಕೇಂದ್ರದಲ್ಲಿ ನರ್ಸ್ಯೊಬ್ಬರನ್ನು ಕಟ್ಟಿಹಾಕಿ, ನಾಲ್ವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಇದುವರೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಲ್ಲಿ ಅಪ್ರಾಪ್ತ 17 ವರ್ಷದ ಯುವಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರಿಗೆ ಈ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನರ್ಸ್ ಆರೋಪಿಸಿದ್ದಾರೆ.
ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಗ್ಯ ಕೇಂದ್ರದಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆಯನ್ನು ಆರೋಪಿ ಗಮನಿಸಿದ್ದಾನೆ. ನಂತ್ರ ಈ ನಾಲ್ವರು ಆಕೆಯನ್ನು ಕಟ್ಟಿಹಾಕಿ ಅತ್ಯಾಚಾರವೆಸಗಿದ್ದಾರೆ. ನಂತ್ರ, ನರ್ಸ್ ಪೋಷಕರಿಗೆ ಮಾಹಿತಿ ನೀಡಿ ಪೊಲೀಸರಿಗೆ ದೂರು ನೀಡಿದ್ದಾರೆ.