ಚಿಕ್ಕಮಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಹಿಂದುಳಿದ ವರ್ಗಗಳ ಆಯುಕ್ತರು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಮೆಟ್ರಿಕ್–ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ–ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ ಹಾಗೂ ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ www.bcwd.karnataka.gov.in/ ಅಥವಾ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಹಾಗೂ ಇಮೇಲ್-8050770005 bcwd.scholarship@karnataka.gov.in ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Health Tips: ಈ ಆಹಾರಗಳು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿ | Digestion improve