ಕೆಎನ್ ಎನ್ ನ್ಯೂಸ್ ಡೆಸ್ಕ್ : ದೇಹದಲ್ಲಿ ರೋಗ ನಿರೋಧಕ ಶಕ್ತಿ ಬಹಳ ಪ್ರಾಮುಖ್ಯತೆ. ಅದರಲ್ಲೂ ವಿಟಮಿನ್ ‘ ಸಿ ‘ ಅಂಶಗಳನ್ನು ಒಳಗೊಂಡಿರುವ ಆಹಾರಗಳ ಪ್ರಾಮುಖ್ಯತೆ ಏನೆಂಬುದು ನಮಗೆಲ್ಲಾ ಗೊತ್ತೇ ಇದೆ.
ಆದರೆ ಇಂತಹ ಆಹಾರಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ ಬದಲಿಗೆ ದೀರ್ಘಕಾಲ ಕಾಯಿಲೆಗಳಾದ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ನಂತಹ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿರಿಸುವಲ್ಲಿ ಇವುಗಳ ಮಹತ್ವದಾಗಿದೆ. ಬನ್ನಿ ಇಂದಿನ ಈ ಲೇಖನದಲ್ಲಿ ಯಾವೆಲ್ಲಾ ಬಗೆಯ ವಿಟಮಿನ್ ಸಿ ಅಂಶಗಳು ಹೆಚ್ಚಿರುವ ಆಹಾರಗಳನ್ನು ಸೇವನೆ ಮಾಡುವುದರಿಂದ ಇಂತಹ ದೀರ್ಘ ಕಾಲದ ಕಾಯಿಲೆಗಳಿಂದ ದೂರ ಇರಬಹುದು ನೋಡೋಣ
* ವರ್ಷವಿಡೀ ಸಿಗುವ ಟೊಮೆಟೊ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರಲ್ಲಿರುವ ಲೈಕೋಪೀನ್ ಎನ್ನುವ ನೈಸರ್ಗಿಕ ಅಂಶ ಉತ್ಕರ್ಷಣ ನಿರೋಧಕವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಟೊಮೆಟೊ ಹಣ್ಣನ್ನು ದೈನಂದಿನ ಅಡುಗೆಯಲ್ಲಿ ಬಳಸುವುದರಿಂದ, ಮಧುಮೇಹ, ಕ್ಯಾನ್ಸರ್, ಹೃದ್ರೋಗಗಳ ಅಪಾಯ ದೂರವಾಗುತ್ತದೆ
* ಸೀಬೆ ಹಣ್ಣಿನಲ್ಲಿ ಅಪಾರ ಪ್ರಮಾಣದ ವಿಟಮಿನ್ ಸಿ ಹಾಗೂ ಪೊಟ್ಯಾಶಿಯಂ ಅಂಶ ಅಡಗಿದೆ. ಇವು ರಕ್ತ ದೊತ್ತಡವನ್ನು ನಿಯಂತ್ರಣ ಮಾಡುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಈ ಹಣ್ಣಿನಲ್ಲಿ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ ರಕ್ತದೊತ್ತ ಡವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿವಾರಣೆ ಮಾಡುತ್ತದೆ.
* ನೆಲ್ಲಿಕಾಯಿನಿಂದ ವಿಟಮಿನ್ ‘ ಸಿ ‘ ಅಂಶ ಯಥೇಚ್ಛವಾಗಿದೆ. ಆದರೆ ಕೇವಲ ಈ ಸಂದರ್ಭಕ್ಕೆ ಮಾತ್ರವಲ್ಲದೆ ಆಯುರ್ವೇದ ಕಾಲದಿಂದಲೂ ಕೂಡ ನಮ್ಮ ಆರೋಗ್ಯಕ್ಕೆ, ಇದರಿಂದ ಸಾಕಷ್ಟು ಪ್ರಯೋಜನಗಳು ಸಿಗುತ್ತಾ ಬಂದಿದೆ. ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವುದರಿಂದ ಹಿಡಿದು ಮಧುಮೇಹ, ರಕ್ತದೊತ್ತಡ ದಂತಹ ಸಮಸ್ಯೆಗಳನ್ನು ದೂರ ಮಾಡುವಲ್ಲಿ ಬೆಟ್ಟದ ನೆಲ್ಲಿಕಾಯಿ ಉಪಯೋಗಕ್ಕೆ ಬರುತ್ತದೆ.
* ವಿಟಮಿನ್ ಸಿ ಹೆಚ್ಚಿರುವ ಹಣ್ಣು-ತರಕಾರಿಗಳಲ್ಲಿ ಆಂಟಿಆಕ್ಸಿಡೆಂಟ್ ಅಂಶ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ರಕ್ತದೊತ್ತಡ, ಹೃದಯಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಗುಣಲಕ್ಷಣಗಳನ್ನು ಒಳಗೊಂಡಿದೆ.