ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗ ದೇವೀರಮ್ಮನ ಬೆಟ್ಟ ಹತ್ತಲು ಕ್ಷಣಗಣನೆ ಆರಂಭವಾಗಿದ್ದು, ದೇವಿ ದರ್ಶನಕ್ಕೆ ಕಾತುರರರಾಗಿದ್ದಾರ.
ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿಯನ್ನ ನೋಡಲು ಇಂದು (ಭಾನುವಾರ) ಮಧ್ಯರಾತ್ರಿಯಿಂದಲೇ ಸಾವಿರಾರು ಜನ ಬೆಟ್ಟ ಹತ್ತಲಿದ್ದಾರೆ. ಭಕ್ತರು ನಾಳೆ ಸೋಮವಾರ ಬೆಳಗಿನ ಜಾವದ ಹೊತ್ತಿಗೆ ಗುಡ್ಡದ ತುದಿಯಲ್ಲಿ ನಿಂತಿರುತ್ತಾರೆ. ಈ ಬೆಟ್ಟ ಸಮುದ್ರ ಮಟ್ಟದಿಂದ ಸುಮಾರು 3,800 ಅಡಿ ಇದೆ ಎನ್ನಲಾಗಿದೆ. ಪ್ರತಿ ವರ್ಷ ಈ ಬೆಟ್ಟವನ್ನು 50 ಸಾವಿರಕ್ಕೂ ಅಧಿಕ ಭಕ್ತರು ಹತ್ತಿ ದೇವಿಯ ದರ್ಶನ ಪಡೆಯುತ್ತಿದ್ದು, ಈ ವರ್ಷ 80 ಸಾವಿರಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತಬಹುದು ಎಂದು ಅಂದಾಜಿಸಲಾಗಿದೆ.
ಈಗಾಗಲೇ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.. ಪೊಲೀಸ್ ಇಲಾಖೆ ಕೂಡ ಬಿಗಿ ಬಂದೋಬಸ್ತ್ ಕಲ್ಪಿಸಿದ್ದು, ಓರ್ವ ಡಿವೈಎಸ್ಪಿ, ಎಂಟು ಜನ ಸರ್ಕಲ್ ಇನ್ಸ್ಪೆಕ್ಟರ್, 32 ಜನ ಪಿಎಸ್ಐ, 87 ಜನ ಎಎಸ್ಐ, 500ಕ್ಕೂ ಅಧಿಕ ಜನ ಪೇದೆಗಳು, 62 ಜನ ಹೋಂಗಾರ್ಡ್ಸ್ ಹಾಗೂ 6 ಡಿಎಆರ್ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
Diwali Alert ; ಮಹಿಳೆಯರೇ ಎಚ್ಚರ, ‘ಹ್ಯಾಪಿ ದೀಪಾವಳಿ’ ಅಂತಾ ದೋಚ್ತಿದ್ದಾರೆ.! ನೀವೇ ಟಾರ್ಗೇಟ್