ಉಡುಪಿ: ರಾಜ್ಯದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸುವ ಬದಲಾಗಿ, ವರ್ಷಕ್ಕೊಮ್ಮೆ ವಿದ್ಯುತ್ ದರವನ್ನು ( Electricity Tariff Hike ) ಹೆಚ್ಚಿಸುವ ಕುರಿತಂತ ಪ್ರಸ್ತಾವವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರ ಮುಂದಿಟ್ಟಿರುವುದಾಗಿ ಇಂಧನ ಸಚಿವ ವಿ.ಸುನೀಲ್ ಕುಮಾರ್ ( Minister V Sunil Kumar ) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿದ್ಯುತ್ ಗ್ರಾಹಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸುವುದರಿಂದ ಹೊರೆ ಆಗಲಿದೆ. ಹೀಗಾಗಿ ವರ್ಷಕ್ಕೊಮ್ಮೆ ಹೆಚ್ಚಿಸುವುದು ಸೂಕ್ತ ಎಂಬ ಚಿಂತನೆ ನಡೆದಿದೆ. ಈ ಬಗ್ಗೆ ಸಿಎಂ ಹಾಗೂ ಕೆ ಇ ಆರ್ ಸಿ ಗೂ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಉತ್ತಮ ಮಳೆ ಹಾಗೂ ಕಲ್ಲಿದ್ದಲು ಶೇಖರಣೆಯಿಂದಾಗಿ ವಿದ್ಯುತ್ ಕೊರತೆ ಉಂಟಾಗುವುದಿಲ್ಲ. ದೀಪಾವಳಿ ಹಬ್ಬಕ್ಕೂ ಲೋಡ್ ಶೆಡ್ಡಿಂಗ್ ಆಗುವುದಿಲ್ಲ. ಬೇಸಿಗೆಯಲ್ಲೂ ವಿದ್ಯುತ್ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.