ಪಾಟ್ನಾ(ಬಿಹಾರ): ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ನಾಲ್ವರು ಬಾಲಕಿಯರು ಸೇರಿ 40 ವರ್ಷದ ವ್ಯಕ್ತಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ
ಮೃತ ಬಾಲಕಿಯರು 13 ರಿಂದ 15 ವರ್ಷದ ಆಸುಪಾಸಿನವರಾಗಿದ್ದಾರೆ. ಇವರು ಬಟ್ಟೆ ತೊಳೆಯಲೆಂದು ಹಮೀದ್ನಗರ ಗ್ರಾಮದ ಪನ್ಪುನ್ ನದಿಗೆ ತೆರಳಿದ್ದರು. ಈ ವೇಳೆ ಓರ್ವ ಬಾಲಲಿ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ಅವಳನ್ನು ರಕ್ಷಿಸಲು ಉಳಿದ ಮೂರು ಬಾಲಕಿಯರು ನದಿಗೆ ಇಳಿದಿದ್ದಾರೆ. ಇವರೆಲ್ಲರೂ ನದಿಯಲ್ಲಿ ಮುಳುಗುತ್ತಿದ್ದನ್ನು ಕಂಡ ಅಲ್ಲಿದ್ದ ವ್ಯಕ್ತಿಯೊಬ್ಬರು ಅವರನ್ನು ರಕ್ಷಿಸಲು ಹೋಗಿ ಎಲ್ಲಾ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ದೌದ್ನಗರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಕುಮಾರಿ ಅನುಪಮ್ ಸಿಂಗ್ ಹೇಳಿದ್ದಾರೆ.
ಈ ಘಟನೆಯ ಸುದ್ದಿ ತಿಳಿದು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಕ್ಕೆ ತಲಾ ₹ 4 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
BIGG NEWS : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್
BIG NEWS: ಸೊಮಾಲಿಯಾದಲ್ಲಿ ಅಲ್-ಶಬಾಬ್ ಉಗ್ರ ಸಂಘಟನೆಯಿಂದ ಗುಂಡಿನ ದಾಳಿ: ಮಕ್ಕಳು ಸೇರಿ 9 ಮಂದಿ ಸಾವು