ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.
BREAKING NEWS : ಚಳ್ಳಕೆರೆ ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ : ಎಫ್ಐಆರ್ ದಾಖಲು
ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಕುತ್ತಿಗೆಗೆ ತಗುಲಿ ಗಂಭೀರ ಗಾಯಗಳಾಗಿವೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ವರ್ಧನ್ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
BREAKING NEWS : ಚಳ್ಳಕೆರೆ ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ : ಎಫ್ಐಆರ್ ದಾಖಲು