ಶಿವಮೊಗ್ಗ : ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂ ಗೊಳಿಸಿದ ಆರೋಪದ ಮೇಲೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ ಒಟ್ಟು 15 ಮಂದಿ ವಿರುದ್ಧ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್ನಲ್ಲಿ ಬಂದ 10ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದಾರೆ.
ವೇಳೆ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಹಾನಿಯಾಗಿದೆ. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು ಎಂದು ಸಯ್ಯದ್ ಫರ್ವೀಜ್ ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಫೆ.20ರಂದು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೀಡಾಗಿದ್ದ.