ಆಂಧ್ರಪ್ರದೇಶ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ಅಮೆಜಾನ್ ಸಂಗ್ರಹಣಾ ಘಟಕದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 10 ಲಕ್ಷ ಮೌಲ್ಯದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಕುಪ್ಪಂ ಬಡಾವಣೆಯಲ್ಲಿರುವ ಗೋಡೌನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯ ಪ್ರಕಾರ ಕುಪ್ಪಂ ಇನ್ಸ್ ಪೆಕ್ಟರ್ ಶ್ರೀಧರ್ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.