ಶಿವಮೊಗ್ಗ : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡೆರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರುಪಾಯಿ ಸಾಲ ಮತ್ತು ಅನುದಾನ ಕೊಡುತ್ತಿದ್ದೇವೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡೋ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.
ಇನ್ನು ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುತ್ತಿದ್ದೇವೆ. ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರುಪಾಯಿ ಅನುದಾನ ಕೊಡುತ್ತಿದ್ದೇವೆ. 5 ಲಕ್ಷ ಯುವಕರಿಗೆ ಕೊಡೋ ಯೋಜನೆ ಇದಾಗಿದೆ. ಎರಡೂ ಯೋಜನೆಗಳನ್ನು ಡಿಸೆಂಬರ್ನಲ್ಲಿ ಪ್ರಾರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.
BIGG NEWS : ಕಿತ್ತೂರು ಬಳಿ ಕೈಗಾರಿಕೆ ಟೌನ್ ಶಿಪ್ ನಿರ್ಮಾಣ, 50 ಸಾವಿರ ಉದ್ಯೋಗ ಸೃಷ್ಟಿ : ಸಿಎಂ ಬೊಮ್ಮಾಯಿ ಘೋಷಣೆ