ಚಿತ್ರದುರ್ಗ : ಮುಂದಿನ ವಿಧಾನಸಭೆ ಚುನಾವಣೆಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಕ್ಷೇತ್ರ ಘೋಷಣೆ ಮಾಡಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
BIGG NEWS : ಶೀಘ್ರವೇ ಮಾಜಿ ಸಚಿವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಗೆ ಸೇರ್ಪಡೆ?
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ 2023 ರ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.
ದೀಪಾವಳಿ ದಿನದಂದೇ ಮೀಸಲಾತಿ ಜಾರಿಯಾಗಿದ್ದು ಸಂತೋಷವಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಮೀಸಲಾತಿ ಜಾರಿ ಸಂಬಂಧ ಹಲವರು ನಿಂದಿಸಿದರೂ ತಲೆಕೆಡಿಸಿಕೊಳ್ಳದೇ ಮೀಸಲಾತಿ ಜಾರಿಗೆ ತಂದಿದ್ದೇವೆ ಎಂದರು.
BIGG NEWS : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಸಚಿವ ಸ್ಥಾನದ ರೇಸ್ ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?