ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಮತ್ತೆ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಬಜರಂಗದಳದ ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ತಡರಾತ್ರಿ ನಡೆದಿದೆ.ಇದೀಗ ಹರ್ಷ ಸಹೋದರಿ ಅಶ್ವಿನಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS : ಬೆಚ್ಚಿ ಬೀಳಿಸುವಂತಿದೆ ಕರ್ನಾಟದಲ್ಲಿ ಅತಿ ವೇಗದ ಚಾಲನೆಯಿಂದ ಮೃತಪಟ್ಟವರ ಸಂಖ್ಯೆ!
ದುಷ್ಕರ್ಮಿಗಳಿಂದ ನಮಗೆ ಭಯ ಆಗುತ್ತಿದೆ. ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ರಾತ್ರಿ 11.15 ರ ಸಮಯಕ್ಕೆ 3-4 ಬೈಕ್ ನಲ್ಲಿ ಯುವಕರು ಬಂದಿದ್ದರು. ಮಾರಕಾಸ್ತ್ರ ಹಿಡಿದುಕೊಂಡು ಓಡಾಡುತ್ತಿದ್ದರು ಎಂದು ಹೇಳಿದರು.
BIGG NEWS : ಬೆಚ್ಚಿ ಬೀಳಿಸುವಂತಿದೆ ಕರ್ನಾಟದಲ್ಲಿ ಅತಿ ವೇಗದ ಚಾಲನೆಯಿಂದ ಮೃತಪಟ್ಟವರ ಸಂಖ್ಯೆ!
ಹರ್ಷನ ತೆಗೆದಿದ್ದು ಸಾಲದಾ, ನಿಮ್ಮನ್ನೂ ತೆಗೆಯಬೇಕಾ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಯುವಕರ ಗುಂಪು ಅವಾಜ್ ಹಾಕಿದ್ದಾರೆ. ಇನ್ನು ಎಷ್ಟು ಮಂದಿ ಹಿಂದೂ ಯುವಕರ ಬಲಿಯಾಗಬೇಕು..?. ನನ್ನ ಸಹೋದರ ಹರ್ಷ ಹೋದ, ಪ್ರವೀಣ್ ನೆಟ್ಟಾರ್ ಹೋದ. ಆದರೂ ಅವರ ದಾಹ ಇನ್ನೂ ತೀರಿಲ್ಲ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಮಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.