ಶಿವಮೊಗ್ಗ: ಶಿವಮೊಗ್ಗದ ವೆಂಕಟೇಶ ನಗರದ ಎ.ಎನ್.ಕೆ ರಸ್ತೆ ಬಳಿ ವೈಯಕ್ತಿಕ ಕಾರಣಕ್ಕಾಗಿ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
37 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿ. ವಿಜಯ್ ಶಿವಮೊಗ್ಗದ ಭಾರತ ನ್ಯೋರೂ ಕ್ಲಿನಿಕ್ನಲ್ಲಿ ಅಕೌಂಟ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ನಿನ್ನೆ ರಾತ್ರಿ ತಮ್ಮ ತಂದೆ ಹಾಗೂ ಕುಟುಂಬದವರ ಜೊತೆ ಚಲನಚಿತ್ರ ವೀಕ್ಷಣೆ ಮಾಡಿ ಮನೆಗೆ ಬಂದಿದ್ದಾರೆ. ಮನೆಗೆ ಬಂದ ವಿಜಯ್ಗೆ ಪೋನ್ ಬಂದಿದೆ. ತಕ್ಷಣ ವಿಜಯ್ ಮನೆಯಿಂದ ಹೊರಗೆ ಹೋಗಿದ್ದಾರೆ. ಪೋನ್ ಮಾಡಿದವರು ಎ.ಎನ್.ಕೆ ರಸ್ತೆಗೆ ಕರೆಯಿಸಿಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ. ವಿಜಯ್ ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದು, ಗಾಂಧಿನಗರದಲ್ಲಿ ವಾಸ ಮಾಡುತ್ತಿದ್ದರು. ಕೊಲೆಗೆ ಕುಟುಂಬ ಕಲಹವೇ ಕಾರಣ ಎಂದು ಹೇಳಲಾಗ್ತಿದೆ.
ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಕೊಲೆ ದೃಶ್ಯ ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರು ವಿಜಯ್ ಅವರನ್ನು ಓಡಿಸಿಕೊಂಡು ಬಂದು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಜಯನಗರ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.