ಬೆಂಗಳೂರು : ನ. 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರತಿ ಮನೆಗಳಲ್ಲಿ ಕನ್ನಡದ ಭಾವುಟ ಹಾರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಕನ್ನಡಿಗರ ಕತ್ತನ್ನು ಹಿಸುಕುವ ಕೆಲಸ ಮಾಡುತ್ತಿದೆ. ಕನ್ನಡಿಗರ ಒಗ್ಗಟ್ಟನ್ನು ಇಡೀ ವಿಶ್ವವೇ ನೋಡಬೇಕು, ಪ್ರತಿಯೊಬ್ಬರ ಮನೆ ಮೇಲೂ ಕನ್ನಡ ಬಾವುಟ ಹಾರಿಸಿ. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ನಿಲ್ಲಬೇಕು, ಹಿಂದಿ ಹೇರಿಕೆ ಮಾಡಿ ಉದ್ಯೋಗ ಕಸಿದುಕೊಳ್ಳಲಾಗುತ್ತಿದೆ. ನ. 1 ರಂದು ಮನೆಗಳ ಮೇಲೆ ‘ಕನ್ನಡ ಧ್ವಜ’ ಹಾರಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕರೆ ನೀಡಿದ್ದಾರೆ.
ಪ್ರತಿ ಮನೆಗಳಲ್ಲಿ ಕನ್ನಡದ ಭಾವುಟ ಹಾರಿಸುವಂತೆ ಡಾ. ಮಹೇಶ ಜೋಶಿ ಕರೆ
ಕನ್ನಡದ ಕಣ್ವ ಖ್ಯಾತಿಯ ಬಿ.ಎಂ.ಶ್ರೀಕಂಠಯ್ಯನವರು ರಚಿಸಿದ ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ ಎನ್ನುವಂತೆ ಈ ಬಾರಿ ಅರ್ಥಪೂರ್ಣವಾಗಿ ಕನ್ನಡ ಪ್ರೇಮ ಮೆರೆಯೋಣ, ಈ ಬಾರಿ ಕನ್ನಡ ರಾಜ್ಯೋತ್ಸವ ದಂದು ಪ್ರತಿ ಮನೆಗಳ ಮೇಲೆ ಕನ್ನಡಧ್ವಜ ಹಾರಿಸುವಂತೆ ಡಾ. ಮಹೇಶ ಜೋಶಿ ಕರೆ ನೀಡಿದ್ದಾರೆ.
ನ.1ರಂದು ನಾಡಿನಾದ್ಯಂತ ಎಲ್ಲೆಡೆಯೂ ಹಳದಿ ಕೆಂಪು ಬಣ್ಣವು ರಾರಾಜಿಸಲಿ. ಎಲ್ಲರ ಮನ-ಮನೆಯಲ್ಲೂ ಕನ್ನಡತನ ಮೆರೆಯಲಿ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹೇಳಿದರು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.
BIG NEWS: ದೀಪಾವಳಿ ಹಬ್ಬದಂದು ಮೇಲುಕೋಟೆಯಲ್ಲಿ ಶೋಕಾಚರಣೆ; ಅಯ್ಯಂಗಾರ ಹತ್ಯೆ ಖಂಡಿಸಿ ಪಂಜಿನ ಮೆರವಣಿಗೆ
BIG NEWS: ದೀಪಾವಳಿ ಹಬ್ಬದಂದು ಮೇಲುಕೋಟೆಯಲ್ಲಿ ಶೋಕಾಚರಣೆ; ಅಯ್ಯಂಗಾರ ಹತ್ಯೆ ಖಂಡಿಸಿ ಪಂಜಿನ ಮೆರವಣಿಗೆ