ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ಕುರಿತು ಸಿಎಂ ಬೊಮ್ಮಾಯಿ ಅವರೇ ಹೇಳಿರುವಾಗ ಮತ್ತೆ ಯಾಕೆ ಅನಗತ್ಯ ಗೊಂದಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ದೆಹಲಿ ಪ್ರವಾಸ ಮಾಡಲಿದ್ದಾರೆ. ಸ್ವತಃ ಸಿಎಂ ಬೊಮ್ಮಾಯಿ ಅವರೇ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಬಂದಾಗ ನಾವೆಲ್ಲ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ತೇವೆ ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.
ದೀಪಾವಳಿ ಬಳಿಕ ದೆಹಲಿಗೆ ಬರುವುದಾಗಿ ಸಿಎಂ ಬೊಮ್ಮಾಯಿ ನನಗೆ ತಿಳಿಸಿದ್ದಾರೆ. ಹೀಗಿರುವಾಗ ಸಂಪುಟ ವಿಸ್ತರಣೆ ಬಗ್ಗೆ ಯಾರೂ ಗೊಂದಲಪಡುವ ಅಗತ್ಯವಿಲ್ಲ. ಸಮಯ ಬಂದಾಗ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದರು.