ಚಿತ್ರದುರ್ಗ : ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತಂದು ಸ್ಥಳ ಮಹಜರು ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗದ ಮುರುಘಾ ಮಠಕ್ಕೆ ಇಬ್ಬರು ಸಂತ್ರಸ್ತ ಬಾಲಕಿಯರನ್ನು ಕರೆತಂದು ಸ್ಥಳ ಮಹಜರು ಮಾಡಲಾಗಿದೆ. ಮುರುಘಾ ಶರಣರ ವಿಶ್ರಾಂತಿ ಕೊಠಡಿ, ಕೋಣೆ , ಕಚೇರಿ ಸೇರಿದಂತೆ ಹಲವು ಕಡೆ ಸ್ಥಳ ಮಹಜರು ಮಾಡಲಾಗಿದೆ.
ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಅ.14 ರಂದು ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಠದ ಅಡುಗೆ ಸಹಾಯಕಿ ತನ್ನ ಇಬ್ಬರು ಪುತ್ರಿಯರ ಮೇಲೆ ಮುರುಘಾ ಶ್ರೀಗಳು ಲೈಂಗಿಕ ಕಿರುಕುಳ ನೀಡಿದ್ದರು ಎಂದು ದೂರು ನೀಡಿದ್ದರು. ಮೈಸೂರಿನ ಒಡನಾಡಿನ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದ ಇಬ್ಬರು ಬಾಲಕಿಯರನ್ನು ಮಠಕ್ಕೆ ಕರೆತಂದು ಸ್ಥಳ ಮಹಜರು ಮಾಡಲಾಗಿದೆ.
ನ್ಯಾಯಾಲಯದಲ್ಲಿ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಿಕೊಂಡ ಬಳಿಕ ಚಿತ್ರದುರ್ಗ ಗ್ರಾಮಾಂತರ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಲಾಗಿದೆ.
ಚಿತ್ರದುರ್ಗದ ಮುರುಘಾ ಶ್ರೀ ( Murgha Sri ) ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ನ್ಯಾಯಾಧೀಶರ ಎದುರು ಬಾಲಕಿಯರು CRPC 164 ಅನ್ವಯ ಹೇಳಿಕೆ ದಾಖಲಿಸಲಾಗಿದೆ. ಮುರುಘಾ ಮಠದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮುರುಘಾ ಶರಣರು ತನ್ನಿಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಕ್ಟೋಬರ್ 14ರಂದು ಮೈಸೂರಿನಲ್ಲಿ ದೂರು ನೀಡಿದ್ದರು. ಆ ದೂರಿನನ್ವಯ ಮಂಗಳವಾರ ಸಂತ್ರಸ್ತ ಬಾಲಕಿಯರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರ ಮುಂದೆ ಬಾಲಕಿಯರು ಹೇಳಿಕೆಗಳನ್ನು ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ 6 ಮತ್ತು 7ನೇ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಅ.28 ಕ್ಕೆ ಮುಂದೂಡಿದೆ. ಮುರುಘಾ ಶರಣದ ಸಹಾಯಕ ಮಹಾಲಿಂಗ ಈ ಪ್ರಕರಣದ 6ನೇ ಆರೋಪಿಯಾಗಿದ್ದರೆ, ಬಾಣಸಿಗ ಕರಿಬಸಪ್ಪ 7ನೇ ಆರೋಪಿಯಾಗಿದ್ದಾರೆ. ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಅ 28ಕ್ಕೆ ಮುಂದೂಡಿದೆ. ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಮಠದ ಶ್ರೀಗಳ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.
ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯರು ಇಂದು ಮೈಸೂರಿನಿಂದ ಚಿತ್ರದುರ್ಗಕ್ಕೆ ಬಂದಿದ್ದು, ಚಿತ್ರದುರ್ಗ ಜಿಲ್ಲಾ ಕೋರ್ಟ್ ಜಡ್ಜ್ ಎದುರು CRPC 64 ರಡಿ ಹೇಳಿಕೆ ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀಗಳ ವಿರುದ್ಧ ಚಿತ್ರದುರ್ಗ ಪೊಲೀಸರು 2 ನೇ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
BIGG NEWS : ಹಲಾಲ್ ಕಟ್ ವಿಚಾರದಲ್ಲಿ ಬಿಜೆಪಿ ಕಮಿಷನ್ ಹೊಡೆಯುತ್ತಿದ್ದಾರೆ : ಸಂಸದ ಅಸಾದುದ್ದೀನ್ ಓವೈಸಿ ಕಿಡಿ
BREAKING NEWS : ಬೆಂಗಳೂರಿನಲ್ಲಿ ‘ಪಟಾಕಿ’ ಅವಘಡ : ಕಣ್ಣಿನ ದೃಷ್ಟಿ ಕಳೆದುಕೊಂಡ ಯುವಕ
BREAKING NEWS : ಬೆಂಗಳೂರಿನಲ್ಲಿ ‘ಪಟಾಕಿ’ ಅವಘಡ : ಕಣ್ಣಿನ ದೃಷ್ಟಿ ಕಳೆದುಕೊಂಡ ಯುವಕ