ಹುಬ್ಬಳ್ಳಿ: ಸಿಎಂ ಬಸವರಾಜ ಬೊಮಾಯಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ಬಂದ ಮೇಲೆ ಏನೇನಾಗುತ್ತೋ ನೋಡೋಣ ಎಂದಷ್ಟೇ ತಿಳಿಸಿದ್ದಾರೆ.
BREAKING NEWS : ‘ಸೂರ್ಯಗ್ರಹಣ’ ವೀಕ್ಷಿಸಲು ನಂದಿಬೆಟ್ಟಕ್ಕೆ ಹರಿದು ಬಂದ ಪ್ರವಾಸಿಗರ ದಂಡು |Nandi Hills
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು. ಅಲ್ಲದೇ ಮುಖ್ಯಮಂತ್ರಿಗಳು ಕೇಂದ್ರದ ಹೈಕಮಾಂಡ್ ಸಲಹೆ ಸೂಚನೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಮಾಡುವ ಪ್ರಕ್ರಿಯೆ ಆಗಿದೆ ಎಂದು ಹೇಳಿದರು.ಈಗಾಗಲೇ ಮುಖ್ಯಮಂತ್ರಿಗಳು ದೀಪಾವಳಿ ಆದ ಮೇಲೆ ದೆಹಲಿಗೆ ಹೋಗಲು ತಿರ್ಮಾನ ಮಾಡಿದ್ದಾರೆ. ಅವರು ದೆಹಲಿಗೆ ಹೋಗಿ ಬಂದ ಮೇಲೆ ಏನೇನೂ ಬೆಳವಣಿಗೆ ಆಗುತ್ತದೆ ಎಂದು ನೋಡೋಣ ಎಂದರು.