ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.
ದೀಪಾವಳಿ ಹಬ್ಬದ ದಿನ ‘ಅಗ್ನಿ ದುರಂತ’ ತಪ್ಪಿಸಲು ಈ ನಿಯಮಗಳ ಪಾಲನೆ ಕಡ್ಡಾಯ |Diwali 2022
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ ತನಕ ಕನಿಷ್ಟ ತಾಪಮಾನ ದಾಖಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಯ ಹಲವಡೆ ಕನಿಷ್ಟ 10.9 ರಿಂದ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಕುಸಿದಿದೆ.