ಬೆಂಗಳೂರು : ವೈದ್ಯ, ದಂತ ವೈದ್ಯ ಕೋರ್ಸ್ ಪ್ರವೇಶದ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಯುಜಿ ನೀಟ್ ರ್ಯಾಂಕಿಂಗ್ ಅಭ್ಯರ್ಥಿಗಳಿಗೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಗೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ವೈದ್ಯ, ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅಕ್ಟೋಬರ್ 27 ರಿಂದ ನವೆಂಬರ್ 2 ರವರೆಗೆ ದಾಖಲೆಗಳ ಪರಿಶೀಲನೆ ನಡೆಯಲಿದೆ. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಪರಿಶೀಲನೆಗೆ ಹಾಜರಾಗುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಇನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಯುಪಿಎಸ್ ಸಿ, ಕೆಎಎಸ್, ಎಸ್ ಎಸ್ ಇ, ಬ್ಯಾಂಕಿಂಗ್ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ನಡೆಸುವ ಪ್ರವೇಶ ಪರೀಕ್ಷೆಯನ್ನು ನವೆಂಬರ್ 13 ರಂದು ಕೆಇಎ ನಡೆಸಲಿದೆ.
ಬ್ರಿಟನ್ ಪಿಎಂ ʻರಿಷಿ ಸುನಕ್ʼರನ್ನು ವಿಶೇಷ ರೀತಿಯಲ್ಲಿ ಅಭಿನಂದಿಸಿದ ʻಅಮುಲ್ ʼ| Amul Congratulates Rishi Sunak