ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ನಾಳೆ ಕಬ್ಬು ಬೆಳೆಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ.
BREAKING NEWS : ವಿವಾದದ ಸುಳಿಯಲ್ಲಿ ‘ಹೆಡ್ ಬುಷ್’ ಚಿತ್ರ : ನಟ ಡಾಲಿ ಧನಂಜಯ್ ಹೇಳಿದ್ದೇನು..? |Actor Dhananjay
ನಾಳೆ ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಅಲ್ಲದೆ, ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯ ಕಬ್ಬು ಬೆಳೆಗಾರರದ್ದಾಗಿದೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ನಾಳೆ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.