ನವದೆಹಲಿ:ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರಿಸಿದ ಬೆನ್ನಲ್ಲೇ ಸೋನಿಯಾ, ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ವಾರವಷ್ಟೇ ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ 66 ವರ್ಷದ ಶಶಿ ತರೂರ್ ಅವರನ್ನು ಸೋಲಿಸಿದ ಕರ್ನಾಟಕದ ಹಿರಿಯ ನಾಯಕ 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರಿಂದ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ , ಕಾರ್ಮಿಕನ ಮಗನನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏರಿಸಿದೆ. ಇದು ನನಗೆ ಅತ್ಯಂತ ಭಾವುಕ ಕ್ಷಣ ಎಂದಿದ್ದಾರೆ.
ಕಳೆದ 24 ವರ್ಷಗಳಲ್ಲಿ ಗಾಂಧಿಯೇತರ ಮೊದಲ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಈ ಸಮಾರಂಭದಲ್ಲಿ ಕೆಸಿ ವೇಣುಗೋಪಾಲ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಅಭಿನಂದಿಸಿದರು.
Delhi | I extend my heartiest congratulations to the newly elected president Mallikarjun Kharge. Change is the rule of the world… Congress had faced a lot of difficulties earlier as well. But I'm sure we will overcome the problems: Outgoing Congress president Sonia Gandhi pic.twitter.com/5xphHp3klD
— ANI (@ANI) October 26, 2022
ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ, “ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾನು ನನ್ನ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಬದಲಾವಣೆ ಜಗದ ನಿಯಮ. ಕಾಂಗ್ರೆಸ್ ಈ ಹಿಂದಿನ ವರ್ಷಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ. ಮುಂದಿನ ದಿನಗಳಲ್ಲೂ ನಾವು ಎಲ್ಲ ರೀತಿಯ ಸಮಸ್ಯೆಗಳನ್ನು ಎದುರಿಸಿ ಮುನ್ನುಗ್ಗುತ್ತೇವೆ ಎಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ.
LIVE: Presentation of Certificate of election at AICC HQ. https://t.co/iNg3U2tFXw
— Mallikarjun Kharge (@kharge) October 26, 2022
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು, 24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 80ರ ಹರೆಯದ ಖರ್ಗೆ ಅವರಿಗೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.