ಶಿವಮೊಗ್ಗ : ಶಿವಮೊಗ್ಗದಲ್ಲಿ ಹಲ್ಲೆಗೊಳಗಾಗಿ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವ ಪ್ರಕಾಶ್ ನನ್ನು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಕಾಶ್ ಭೇಟಿಯಾದ ಮಾಜಿ ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಧನ ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಭರ್ಮಪ್ಪ ನಗರದ 2 ನೇ ಕ್ರಾಸ್ ನಿವಾಸಿ ಪ್ರಕಾಶ್ ಎಂಬಾತನ ಮೇಲೆ ಮೊನ್ನೆ ರಾತ್ರಿ ಸುಮಾರು 11:20 ಸುಮಾರಿಗೆ ಬೈಕ್ ನಲ್ಲಿ ಬಂದ ಮೂವರು ಯುವಕರು ಕಲ್ಲು ಹಾಗೂ ಇಟ್ಟಿಗೆಯಿಂದ ಯುವಕನ ತಲೆಗೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೌಜಾನ್ ಅಲಿಯಾಸ್ ಮಾರ್ಕೆಟ್ ಫೌಜಾನ್, ಆಸ್ಕರ್ ಹಾಗೂ ಫರಾಜ್ ನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
BIGG NEWS: ಬಿಎಸ್ ವೈ ನಿವಾಸದಲ್ಲಿ ದೀಪಾವಳಿ ಸಂಭ್ರಮ; ಗೋ ಪೂಜೆ ನೆರವೇರಿಸಿದ ಯಡಿಯೂರಪ್ಪ
BIGG NEWS: ಬಿಎಸ್ ವೈ ನಿವಾಸದಲ್ಲಿ ದೀಪಾವಳಿ ಸಂಭ್ರಮ; ಗೋ ಪೂಜೆ ನೆರವೇರಿಸಿದ ಯಡಿಯೂರಪ್ಪ
BIGG NEWS : ವೀರಶೈವ ಪರಂಪರೆಗೆ ಅಪಮಾನ ಆರೋಪ : #BoyCottHeadBush ಅಭಿಯಾನ ಶುರು