ಬೆಂಗಳೂರು: ಜಾತ್ಯತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಪರಿಷತ್ ಸಭೆ ಎರಡು ದಿನಗಳ ಕಾಲ (ಅ.27-28) ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕವೂ ಸೇರಿ 13 ರಾಜ್ಯಗಳಿಂದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಲಿದ್ದಾರೆ ಎಂದರು.
ಕೆ.ಎಸ್ ಈಶ್ವರಪ್ಪ ಹದ್ದುಬಸ್ತಿನಲ್ಲಿ ಶಿವಮೊಗ್ಗ ಶಾಂತವಾಗಿರುತ್ತದೆ – ಸಿ.ಎಂ ಇಬ್ರಾಹಿಂ
ಈ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರದ ರಾಜ್ಯದ ರಾಜಕೀಯ ಬೆಳವಣಿಗೆ, ಆರ್ಥಿಕ ವಿಚಾರಗಳು, ಕೋಮು ಸಂಘರ್ಷದ ವಿಷಯಗಳ ವಿಚಾರವಾಗಿ ಚರ್ಚೆ ನಡೆಸಲಾಗುವುದು. ಎರಡೂ ದಿನಗಳ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಎಂದು ಅವರು ಹೇಳಿದರು.
ಪಂಚರತ್ನಕ್ಕೆ ಅಂತಿಮ ತಯಾರಿ
ನವೆಂಬರ್ 1 ರಂದು ಪಂಚರತ್ನ ಯೋಜನೆ ಪ್ರಾರಂಭ ಆಗಲಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ರಥಯಾತ್ರೆಯನ್ನು ಆರಂಭ ಮಾಡಲಾಗುವುದು. ಅದಕ್ಕೂ ಮೊದಲು ಗುರುವಾರ ಬೆಳಗ್ಗೆ ಬೆಂಗಳೂರಿನ ಗವಿಗಂಗಾಧರ ದೇವಸ್ಥಾನದಲ್ಲಿ ಒಂದು ರಥಕ್ಕೆ ಪೂಜೆ ನಡೆಸಲಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
BIG NEWS: ಪ್ರಸಕ್ತ ವರ್ಷ 67 ಸಾಧಕರಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ
1994ರಲ್ಲಿ ಹೆಚ್.ಡಿ.ದೇವೇಗೌಡರು ಕುರುಡುಮಲೆಯಿಂದಲೇ ಚುನಾವಣಾ ಪ್ರಚಾರ ಆರಂಭ ಮಾಡಿದ್ದರು. ಆಗ ಅವರು ಅಮೋಘ ಬಹುಮತ ಗಳಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದ್ದರು. ಈಗ ನಾವೂ ಅಲ್ಲಿಂದಲೇ ಪಂಚರತ್ನ ರಥಯಾತ್ರೆ ಆರಂಭ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ನವೆಂಬರ್ 1ರಂದೇ ಮುಂದಿನ ವಿಧಾನಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಾರ್ವಜನಿಕ ಸಮಾರಂಭದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಆವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
BREAKING NEWS: ನವೆಂಬರ್ 1 ರಂದು ನಟ ಪುನೀತ್ ರಾಜ್ಕುಮಾರ್ಗೆ ಮರೋಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ನವೆಂಬರ್ 1 ರಿಂದ 5ರವರೆಗೆ ಕೋಲಾರ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಲಿದೆ. ನ.6 ರಿಂದ 10 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ, 11 ರಿಂದ 13 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, 14 ರಿಂದ 23 ರವರೆಗೆ ತುಮಕೂರು ಜಿಲ್ಲೆ, 24 ರಿಂದ 30 ರವರೆಗೆ ಹಾಸನ ಜಿಲ್ಲೆಯಲ್ಲಿ, ಡಿಸೆಂಬರ್ 1 ರಂದು ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಡಿಸೆಂಬರ್ 2 ರಿಂದ 5 ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಸಂಚಾರ ಮಾಡಲಿದೆ ಎಂದು ಅವರು ಮಾಹಿತಿ ನೀಡಿದರು.
ಒಟ್ಟು 35 ದಿನಗಳ ಕಾಲ ನಡೆಯುವ ಮೊದಲ ಹಂತದ ರಥ ಯಾತ್ರೆಯಲ್ಲಿ ಅನೇಕ ಹಳ್ಳಿ, ಪಟ್ಟಣಗಳನ್ನು ತಲುಪುತ್ತೇವೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ, ಮಹಿಳಾ ಮತ್ತು ಯುವಜನ ಸಬಲೀಕರಣ ಕುರಿತಂತೆ ರೂಪಿಸಿರುವ ಪಂಚರತ್ನ ಯೋಜನೆ ಇದಾಗಿದೆ ಎಂದು ಅವರು ಹೇಳಿದರು
BIGG NEWS : ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಆಯೋಜನೆ : ಸಚಿವ ಸುನಿಲ್ ಕುಮಾರ್
ಹೊಸ ವರುಷದ ಜನವರಿ ತಿಂಗಳಲ್ಲಿ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಪೂಜೆ ನಡೆಸಿ ಆ ಭಾಗದಲ್ಲಿ ಪಂಚರತ್ನ ರಥಯಾತ್ರೆ ಆರಂಭ ಮಾಡಲಾಗುವುದು. ಮುಖ್ಯವಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದೊಡ್ಡ ಸಮಾವೇಶ ಮಾಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದೇವೆ. ಜನವರಿ ನಂತರ ಜಿಟಿ ದೇವೇಗೌಡರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು ಅವರು.
ಬಿಜೆಪಿ, ಕಾಂಗ್ರೆಸ್ ಯತ್ರೆಯಂತಲ್ಲ
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕ್ರಮಗಳಿಗೂ ನಮ್ಮ ಕಾರ್ಯಕ್ರಮಗಳಿಗೂ ವ್ಯತ್ಯಾಸ ಇದೆ. ಯಾವ ನಾಯಕರ ಬಗ್ಗೆಯೂ ನಾವು ಟೀಕೆ ಮಾಡಲ್ಲ. ನಮಂದು ನಿಂದನಾ ಯಾತ್ರೆ ಅಲ್ಲ. ಜನರಿಗೆ ನಮ್ಮ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತೇವೆ. ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಯಾವುದೇ ಆತಂಕ ಇಲ್ಲ. ನಮ್ಮ ರಥಯಾತ್ರೆ ವಿನೂತನವಾಗಿ ಇರಲಿದೆ. ಅಭಿವೃದ್ಧಿಗೆ ಪೂರಕವಾಗಿ ಇರಲಿದೆ. ಒಟ್ಟು 120 ಕ್ಷೇತ್ರಗಳಿಗೆ ಪ್ರವಾಸ ಮಾಡುತ್ತೇವೆ. ಮಾರ್ಚ್ 15 ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ದೀಪಾವಳಿಯಂದು ಕೆನಡಾದಲ್ಲಿ ಖಲಿಸ್ತಾನಿಗಳಿಂದ ಗಲಾಟೆ, ಭಾರತೀಯರಿಂದ ಪ್ರತ್ಯುತ್ತರ, ವಿಡಿಯೋ ವೈರಲ್
ಅಧಿವೇಶನದಲ್ಲಿ ಬಾಗವಹಿಸಲ್ಲ
ನವೆಂಬರ್ 1ರಿಂದಲೇ ನಾನು ಪಂಚರತ್ನ ರಥಯಾತ್ರೆ ಆರಂಭ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸುವುದು ಕಷ್ಟ. ಈ ಬಗ್ಗೆ ವಿಧಾನ ಸಭಾಧ್ಯಕ್ಷರಿಗೆ ಮಾಹಿತಿ ನೀಡುತ್ತೇನೆ. ನನ್ನ ಪರವಾಗಿ ನಮ್ಮ ಪಕ್ಷದ ಶಾಸಕರು ಅಧಿವೇಶನದಲ್ಲಿ ಭಾಗವಹಿಸುತ್ತಾರೆ. ಸಮಯ ಬಹಳ ಕಡಿಮೆ ಇದೆ. ಚುನಾವಣೆಗೂ ಸಿದ್ದರಾಗಬೇಕಿದೆ. ಪಂಚರತ್ನ ಕಾರ್ಯಕ್ರಮ ದಲ್ಲಿ ನಾನು ಹೆಚ್ಚು ತೊಡಗಿಸಿಕೊಳ್ಳುತ್ತೇನೆ. ನಮ್ಮ ಎಲ್ಲ ಶಾಸಕರಿಗೆ ಭಾಗವಹಿಸಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಹಾಜರಿದ್ದರು.