ಬೆಂಗಳೂರು: ಇಂದು ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯಾಧ್ಯಂತ ಕಾಂಗ್ರೆಸ್ ನಾಯಕರ ( Congress Leader ) ಬಸ್ ಯಾತ್ರೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಬಸ್ ಯಾತ್ರೆಗೆ ಸಮ್ಮತಿ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ಧರಾಮಯ್ಯ ( Siddaramaiah ) ಬಸ್ ಯಾತ್ರೆ ನಡೆಸಿದ್ರೇ, ದಕ್ಷಿಣ ಕರ್ನಾಟಕ ಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( DK Shivakumar ) ನಡೆಸಲಿದ್ದಾರೆ ಎನ್ನಲಾಗುತ್ತಿದೆ.
BIG NEWS: ಪ್ರಸಕ್ತ ವರ್ಷ 67 ಸಾಧಕರಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ
ಇನ್ನೂ ಉತ್ತರ ಕರ್ನಾಟಕದ ಬಸವಕಲ್ಯಾಣದಿಂದ ಸಿದ್ಧರಾಮಯ್ಯ ಬಸ್ ಯಾತ್ರೆಯನ್ನು ಆರಂಭಿಸೋ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಭಾಗದಿಂದ ಡಿ.ಕೆ ಶಿವಕುಮಾರ್ ಆರಂಭಿಸಲಿದ್ದಾರೆ ಎನ್ನಲಾಗಿದೆ.
BREAKING NEWS: ನವೆಂಬರ್ 1 ರಂದು ನಟ ಪುನೀತ್ ರಾಜ್ಕುಮಾರ್ಗೆ ಮರೋಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ಕಾಂಗ್ರೆಸ್ ನಾಯಕರು ನಡೆಸಲಿರುವಂತ ಬಸ್ ಯಾತ್ರೆಯು ಪ್ರತಿ ದಿನ 2 ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ. ಕಾಂಗ್ರೆಸ್ ಆಡಳಿತದ ಸರ್ಕಾರದ ಸಾಧನೆ ಸಹಿತ, ರಾಜ್ಯ ಬಿಜೆಪಿ ಸರ್ಕಾರದ 40% ಲಂಚಾವತಾರ, ಸೇರಿದಂತೆ ವಿವಿಧ ವಿಷಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವಂತ ಕೆಲಸ ಮಾಡಲಿದೆ ಎಂದು ಹೇಳಲಾಗುತ್ತಿದೆ.
BIGG NEWS : ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಆಯೋಜನೆ : ಸಚಿವ ಸುನಿಲ್ ಕುಮಾರ್
ಅಂದಹಾಗೇ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಆರಂಭಿಸಲಿರುವಂತ ಬಸ್ ಯಾತ್ರೆಯನ್ನು ಯಾವಾಗ ಆರಂಭಿಸಬೇಕು ಎನ್ನುವ ದಿನಾಂಕವನ್ನು ಶೀಘ್ರವೇ ಸಭೆ ನಡೆಸಿ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ದೀಪಾವಳಿಯಂದು ಕೆನಡಾದಲ್ಲಿ ಖಲಿಸ್ತಾನಿಗಳಿಂದ ಗಲಾಟೆ, ಭಾರತೀಯರಿಂದ ಪ್ರತ್ಯುತ್ತರ, ವಿಡಿಯೋ ವೈರಲ್