ರಾಮನಗರ: ನೆಲಮಂಗಲ ತಾಲ್ಲೂಕು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ.
BREAKING NEWS: ಸರ್ಕಾರದಿಂದ ಓಲಾ, ಉಬರ್ ಗೆ ಮೂಗುದಾರ; ಮುಂದಿನ ವಾರದಲ್ಲೇ ಹೊಸ ದರ ನಿಗದಿ
ವೀರಶೈವ ಮುಖಂಡರಿಂದ ಸಿಎಂ ಬವಸರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಇಂದು ಬೊಮ್ಮಾಯಿ ಅವರನ್ನು ಸಮಾಜದ ಮುಖಂಡ ಪರಮಶಿವಯ್ಯ ನೇತೃತ್ವದಲ್ಲಿ ಭೇಟಿ ಮಾಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಗೆ ಮುಖಂಡರು ಮೆಗಾ ಪ್ಲಾನ್ ಹಾಕಿಕೊಂಡಿದ್ದಾರೆ.
ಇನ್ನು ನೆಲಮಂಗಲ ತಾಲ್ಲೂಕು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಕುದೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
BREAKING NEWS: ಸರ್ಕಾರದಿಂದ ಓಲಾ, ಉಬರ್ ಗೆ ಮೂಗುದಾರ; ಮುಂದಿನ ವಾರದಲ್ಲೇ ಹೊಸ ದರ ನಿಗದಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ವಾಮೀಜಿಗೆ ಹೆಚ್ಚು ಆಪ್ತರಾಗಿದ್ದವರು ಎಂದು ಹೇಳಲಾಗಿದೆ. ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ವಿಡಿಯೊ ಕಾಲ್ ಮಾಡಿದ ಯುವತಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೊಲೀಸರಿಗೆ ಮಹತ್ವದ ಸುಳಿವು ನೀಡಿದ್ದಾರೆ.