ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ಹಿನ್ನೆಲೆ ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಕೆಂಪೇಗೌಡ ಪ್ರತಿಮೆ ಕಾರ್ಯಕ್ರಮದ ಸಿದ್ದತೆ, ಏನೆಲ್ಲಾ ಕ್ರಮ ಕೈಗೊಳ್ಳಬೇಕು , ಕಾರ್ಯಕ್ರಮದ ರೂಪು ರೇಷದ ಬಗ್ಗೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಧಾನಿ ಮೋದಿಯವರು ಸಿಎಂ ಬೊಮ್ಮಾಯಿಂದ ಮಾಹಿತಿ ಪಡೆಯುತ್ತಿದ್ದಾರೆ.
ನವೆಂಬರ್ 11 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಈಗಾಗಲೇ ಭರ್ಜರಿ ಸಿದ್ದತೆ ನಡೆಸಿದೆ.
Vastu Tips: ನಿಮ್ಮ ಮನೆ ಮುಖ್ಯದ್ವಾರದ ಬಳಿ ಏನೆಲ್ಲಾ ವಸ್ತು ಇಡಬೇಕು..! ವಾಸ್ತು ಸಲಹೆಗಳೇನು?
BREAKING NEWS: ಬಾಲಿವುಡ್ ಹಿರಿಯ ನಿರ್ದೇಶಕ `ಎಸ್ಮಯೀಲ್ ಶ್ರಾಫ್’ ಇನ್ನಿಲ್ಲ | Esmayeel Shroff is no more