ಹಾಸನ : ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದೇವಿ’ ಗರ್ಭದ ಗುಡಿ ಇಂದು ಗುರುವಾರ ಮಧ್ಯಾಹ್ನ 12 ಬಂದ್ ಆಗಿದೆ. ಇಂದು(ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಿದೆ. ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಿದ್ದಾರೆ.
ನಿನ್ನೆ ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಇಂದು(ಗುರುವಾರ) ಮಧ್ಯಾಹ್ನ 12 ಗಂಟೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಿದೆ. . ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಕ್ಲೋಸ್ ಆಗಿದೆ.ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನೋತ್ಸವದ ಜೊತೆಗೇ ನಡೆಯುವ ಸಿದ್ದೇಶ್ವರ ಜಾತ್ರೋ ಮಹೋತ್ಸವ ಹಾಗೂ ಕೆಂಡೋತ್ಸವ ಜರುಗಿದೆ. ಮಧ್ಯ ರಾತ್ರಿ ಸಹಸ್ರಾರು ಭಕ್ತರು, ಮಂಗಳವಾದ್ಯ, ನಂದಿಕೋಲು ಕುಣಿತದ ಜೊತೆಗೆ ಹಾಸನಾಂಬೆ ದೇಗುಲದ ಆವರಣದಲ್ಲಿ ನಡೆದ ರಥೋತ್ಸವ ಕಣ್ತುಂಬಿಕೊಳ್ಳಲು ಸಾಗರವೇ ಹರಿದು ಬಂದಿತ್ತು.
ಈ ಬಾರಿ ಅ.13 ರಿಂದ ಬಾಗಿಲು ಹಾಸನಾಂಬೆ ದೇವಾಲಯದ ಬಾಗಿಲು ತೆರೆದರೂ ಅ. 14 ರಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು, ಅಂದಿನಿಂದ ಇದುವರೆಗೆ ಐದು ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಪವಾಡ ದೇವತೆ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ತೆರೆ ಬಿದ್ದಿದೆ.
ಕ್ಯಾಬ್ ವಿಳಂಬವಾಗಿದ್ಕೆ ಫ್ಲೈಟ್ ಮಿಸ್: ಮಹಿಳೆಗೆ 20,000 ರೂ. ನೀಡುವಂತೆ ʻಉಬರ್ʼ ಸಂಸ್ಥೆಗೆ ನ್ಯಾಯಾಲಯ ಆದೇಶ
BIGG NEWS: ಆನೇಕಲ್ ನಲ್ಲಿ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ