ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಮತಗಟ್ಟೆಗಳನ್ನು ಸ್ಥಾಪಿಸಿರುವ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
SBIನ ʻUTSAVʼ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಾಳೆಯೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ
ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಅ. 28 ರಂದು ಮತದಾನ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆ ಸ್ಥಾಪಿಸಿರುವ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಿಗೆ ಅ.27ರ ಮಧ್ಯಾಹ್ನದಿಂದ ಮತದಾನ ನಡೆಯುವ ಅ.28 ರಂದು ರಜೆ ಘೋಷಿಸಲಾಗಿದೆ.
SBIನ ʻUTSAVʼ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಾಳೆಯೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ
ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
SBIನ ʻUTSAVʼ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಾಳೆಯೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ