ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಯ ರಾಯಪುರ ಶಾಖಾ ಕಚೇರಿಯನ್ನು ಉದ್ಘಾಟಿಸಿದರು, ಇದೇ ವೇಳೆ ಅವರು ಮಾತನಾಡುತ್ತ 2024 ರ ಸಾರ್ವತ್ರಿಕ ಚುನಾವಣೆಗೆ ಮೊದಲು ಎಲ್ಲಾ ರಾಜ್ಯಗಳಲ್ಲಿ ಕಚೇರಿಗಳೊಂದಿಗೆ ಫೆಡರಲ್ ಅಪರಾಧ ತನಿಖಾ ಸಂಸ್ಥೆಯಾಗಲು ಸರ್ಕಾರ ಬಯಸಿದೆ ಎಂದು ಹೇಳಿದರು.
ಇದೇ ವೇಳೆ ಅವರು “ಮೇ 2024 ರ ವೇಳೆಗೆ ಎನ್ಐಎ ಎಲ್ಲಾ ರಾಜ್ಯಗಳಲ್ಲಿ ಶಾಖೆಗಳನ್ನು ಹೊಂದಿರುತ್ತದೆ” ಅಂತ ತಿಳಿಸುತ್ತ “ಎನ್ಐಎ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ತನಿಖಾ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಅಲ್ಪ ಕುಸಿತದ ನಂತರ, ಏಜೆನ್ಸಿಯು ತನ್ನ ಎಲ್ಲಾ ಗುರಿಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ” ಎಂದು ಅವರು ಹೇಳಿದರು.
ಇನ್ನೂ “ಗಡಿಯಾಚೆಗಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುವುದು ರಾಜ್ಯಗಳು ಮತ್ತು ಕೇಂದ್ರದ ಸಾಮೂಹಿಕ ಜವಾಬ್ದಾರಿಯಾಗಿದೆ. 2019 ರ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ 57,000 ಕೋಟಿ ರೂ.ಗಳ ಹೂಡಿಕೆ ಬಂದಿದೆ. ಭಾರತದ ಬೆಳವಣಿಗೆಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದ ಎನ್ಜಿಒಗಳ ವಿರುದ್ಧ ನಾವು ಬಲವಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಎನ್ಜಿಓಗಳು ಅದರ ದುರುಪಯೋಗವನ್ನು ತಡೆಯಲು ನಾವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿದ್ದೇವೆ” ಎಂದು ಶಾ ಹೇಳಿದರು.