ಬೆಂಗಳೂರು: ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
BIGG NEWS : ಚಳಿಗಾಲ ಆರಂಭದ ಬೆನ್ನಲ್ಲೇ ಕೇದಾರನಾಥ, ಯಮುನೋತ್ರಿ ಪುಣ್ಯ ಕ್ಷೇತ್ರಗಳು ಬಂದ್ | Chardham Yatra
ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
BIGG NEWS : ಚಳಿಗಾಲ ಆರಂಭದ ಬೆನ್ನಲ್ಲೇ ಕೇದಾರನಾಥ, ಯಮುನೋತ್ರಿ ಪುಣ್ಯ ಕ್ಷೇತ್ರಗಳು ಬಂದ್ | Chardham Yatra
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ನ ಉದ್ಘಾಟನೆಯನ್ನು ಮಾಡಲಿದ್ದಾರೆ. ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು.
BIGG NEWS : ಚಳಿಗಾಲ ಆರಂಭದ ಬೆನ್ನಲ್ಲೇ ಕೇದಾರನಾಥ, ಯಮುನೋತ್ರಿ ಪುಣ್ಯ ಕ್ಷೇತ್ರಗಳು ಬಂದ್ | Chardham Yatra
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬರುವ ಬಗ್ಗೆ 3-4 ಗಣ್ಯರ ಜೊತೆ ಈಗಾಗಲೇ ಚರ್ಚಿಸಲಾಗಿದ್ದು, ಅವರ ಬರುವಿಕೆಯ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಖಾತ್ರಿಗೊಳಿಸಲಿದ್ದಾರೆ. ಬಂಡೆಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಆದೇಶಿದ್ದು, ತನಿಖೆಯ ನಂತರ ಎಲ್ಲ ಸತ್ಯಗಳು ಹೊರ ಬೀಳಲಿದೆ ಎಂದು ತಿಳಿಸಿದರು.
BIGG NEWS : ಚಳಿಗಾಲ ಆರಂಭದ ಬೆನ್ನಲ್ಲೇ ಕೇದಾರನಾಥ, ಯಮುನೋತ್ರಿ ಪುಣ್ಯ ಕ್ಷೇತ್ರಗಳು ಬಂದ್ | Chardham Yatra