ಶಿವಮೊಗ್ಗ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
BIG NEWS: ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ
ಮಾಸ್ಟರ್ಸ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ ಸಾಲದ ಭದ್ರತೆಗೆ ಪೋಷಕರು/ಜಮೀನುದಾರರು ಸ್ಥಿರಾಸ್ತಿ ಭದ್ರತೆಯನ್ನು ನೀಡಬೇಕು.
ಆಸಕ್ತರು ಅರ್ಜಿಯನ್ನು ಸೇವಾಸಿಂಧು ಪೊರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕ ದಿ:30/11/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kvcdc.karnataka.gov.in, ದೂ.ಸಂ.: 080-29904268 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ.: 08182-229634 ನ್ನು ಸಂಪರ್ಕಿಸುವುದು.